Trending

ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ? ಹಾಲಿನ ದರ ಹೆಚ್ಚಳಕ್ಕೆ ಸಿದ್ಧತೆ

Spread the love

ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಸಾಧ್ಯತೆ ಎದುರಾಗಿದೆ. ರಾಜ್ಯದಲ್ಲಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹10 ಹೆಚ್ಚಿಸುವಂತೆ ಹಾಲು ಒಕ್ಕೂಟಗಳು ಸರ್ಕಾರಕ್ಕೆ ಅಧಿಕೃತವಾಗಿ ಮನವಿ ಸಲ್ಲಿಸಿವೆ.

ರೈತರಿಂದ ಹಾಲಿನ ಉತ್ಪಾದನಾ ವೆಚ್ಚ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ದರ ಪರಿಷ್ಕರಣೆಗೆ ನಿರಂತರ ಒತ್ತಾಯ ಬರುತ್ತಿದೆ ಎಂದು ಒಕ್ಕೂಟಗಳು ತಿಳಿಸಿವೆ. ರೈತರ ಹಿತದೃಷ್ಟಿಯಿಂದ ಹಾಲಿನ ದರವನ್ನು ₹10 ಹೆಚ್ಚಿಸುವಂತೆ ಸರ್ಕಾರವನ್ನು ಕೋರಲಾಗಿದೆ ಎಂದು ಬಮುಲ್ ನಿರ್ದೇಶಕ ಹರೀಶ್ ಕುಮಾರ್ ತಿಳಿಸಿದ್ದಾರೆ.

ಇದೇ ವಿಚಾರವಾಗಿ ಸೆಪ್ಟೆಂಬರ್ 22ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಾಲು ಒಕ್ಕೂಟಗಳ ಬೃಹತ್ ಸಭೆ ನಡೆಯಲಿದೆ. ಸಭೆಯ ಬಳಿಕ ಸರ್ಕಾರಕ್ಕೆ ಅಧಿಕೃತವಾಗಿ ಮನವಿ ಪತ್ರ ಸಲ್ಲಿಸಲು ನಿರ್ಧರಿಸಲಾಗಿದೆ.

ಹಾಲಿನ ದರ ಏರಿಕೆಯಾದರೆ ರೈತರಿಗೆ ಅನುಕೂಲವಾಗುವ ಸಾಧ್ಯತೆ ಇದ್ದರೂ, ಗ್ರಾಹಕರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುವ ಸಾಧ್ಯತೆ ಇದೆ. ಹಾಲಿನ ದರ ಹೆಚ್ಚಳದ ಕುರಿತು ಸರ್ಕಾರ ಕೈಗೊಳ್ಳುವ ಅಂತಿಮ ನಿರ್ಧಾರದತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.

[pj-news-ticker]