Trending

ಸಿನಿಮಾ ಪ್ರೇಕ್ಷಕರಿಗೆ ಶಾಕ್ : ಟಿಕೆಟ್ ಮೇಲೆ ಶೇ.2 ಸೆಸ್

Spread the love

ಬೆಂಗಳೂರು: ರಾಜ್ಯದ ಸಿನಿಮಾ ಪ್ರೇಕ್ಷಕರಿಗೆ ಕರ್ನಾಟಕ ಸರ್ಕಾರದಿಂದ ಹೆಚ್ಚುವರಿ ಹೊರೆ ಬೀಳಲಿದೆ. ಸಿನಿಮಾ ಟಿಕೆಟ್‌ಗಳ ಮೇಲೆ ಶೇ.2ರಷ್ಟು ಹೆಚ್ಚುವರಿ ಸೆಸ್‌ (ಉಪಕರ) ವಿಧಿಸುವ ನಿರ್ಧಾರ ಕೈಗೊಳ್ಳಲಾಗಿದ್ದು, ಸೆಪ್ಟೆಂಬರ್ 30ರಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ.

2024ರಲ್ಲಿ ಸರ್ಕಾರ ಮಂಡಿಸಿದ್ದ **‘ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ವಿಧೇಯಕ’**ಕ್ಕೆ 2024ರ ಸೆಪ್ಟೆಂಬರ್ 23ರಂದು ರಾಜ್ಯಪಾಲರು ಅಂಕಿತ ಹಾಕಿದ್ದರು. ಬಳಿಕ ಸೆಪ್ಟೆಂಬರ್ 24ರಂದು ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿತ್ತು. ಇದೀಗ ಸುದೀರ್ಘ ಪ್ರಕ್ರಿಯೆಯ ಬಳಿಕ ಅಧಿನಿಯಮವನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ.

ಹೊಸ ನಿಯಮದ ಪ್ರಕಾರ ಮಲ್ಟಿಪ್ಲೆಕ್ಸ್ ಸೇರಿದಂತೆ ರಾಜ್ಯದ ಸಿನಿಮಾ ಮಂದಿರಗಳಲ್ಲಿ ಟಿಕೆಟ್ ಖರೀದಿಸುವ ಪ್ರೇಕ್ಷಕರು ಟಿಕೆಟ್ ದರದ ಜೊತೆಗೆ ಶೇ.2ರಷ್ಟು ಸೆಸ್ ಪಾವತಿಸಬೇಕಾಗುತ್ತದೆ. ಉದಾಹರಣೆಗೆ ₹200 ಮುಖಬೆಲೆಯ ಟಿಕೆಟ್‌ಗೆ ಹೆಚ್ಚುವರಿಯಾಗಿ ₹4 ಸೆಸ್ ಪಾವತಿಸಬೇಕಾಗುತ್ತದೆ.

ಟಿಕೆಟ್‌ಗಳಿಂದ ಸಂಗ್ರಹವಾಗುವ ಸೆಸ್ ಹಣವನ್ನು ಸಿನಿಮಾ ರಂಗದಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ ಕಲ್ಯಾಣ ಮತ್ತು ಕ್ಷೇಮಾಭಿವೃದ್ಧಿ ಯೋಜನೆಗಳಿಗೆ ಬಳಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಸೆಪ್ಟೆಂಬರ್ 30ರಿಂದ ನಿಯಮ ಜಾರಿಗೆ ಬರಲಿರುವ ಹಿನ್ನೆಲೆಯಲ್ಲಿ ಸಿನಿಮಾ ಟಿಕೆಟ್ ದರದ ಮೇಲೆ ಇದರ ಪರಿಣಾಮ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ.

[pj-news-ticker]