ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಓ) ರಿಷಿ ಆನಂದ್ ಅವರನ್ನು ನೇಮಕ ಮಾಡಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಜಂಟಿ ನಿರ್ದೇಶಕರು ಈ ಕುರಿತು ಆದೇಶ ಹೊರಡಿಸಿದ್ದು, ತಕ್ಷಣವೇ ಶಿವಮೊಗ್ಗ ಜಿಪಂ ಸಿಇಓ ಆಗಿ ಅಧಿಕಾರ ವಹಿಸಿಕೊಳ್ಳುವಂತೆ ಸೂಚಿಸಲಾಗಿದೆ.
ರಿಷಿ ಆನಂದ್ ಅವರು ಈ ಹಿಂದೆ ವಿಜಯಪುರ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಓ ಆಗಿ ನೇಮಕ ಮಾಡಲಾಗಿದೆ.
ಎನ್. ಹೇಮಂತ್‌ಗೆ ಹುಬ್ಬಳ್ಳಿ ವರ್ಗಾವಣೆ
ಶಿವಮೊಗ್ಗ ಜಿಲ್ಲಾ ಪಂಚಾಯತ್‌ನ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದ ಎನ್. ಹೇಮಂತ್ ಅವರನ್ನು ಹುಬ್ಬಳ್ಳಿಗೆ ವರ್ಗಾವಣೆ ಮಾಡಲಾಗಿದೆ. ಅವರನ್ನು ಹುಬ್ಬಳ್ಳಿಯ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ಎನ್. ಹೇಮಂತ್ ಅವರು ಶಿವಮೊಗ್ಗ ಜಿಪಂ ಸಿಇಓ ಆಗಿ ಕಾರ್ಯನಿರ್ವಹಿಸುವುದರ ಜೊತೆಗೆ ಈ ಹಿಂದೆ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗುತ್ತಿದ್ದ ವಿವಿಧ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.
ಹೇಮಂತ್ ಅವರ ವರ್ಗಾವಣೆಯ ಬೆನ್ನಲ್ಲೇ ಇದೀಗ ವಿಜಯಪುರ ಜಿಪಂ ಸಿಇಓ ಆಗಿದ್ದ ರಿಷಿ ಆನಂದ್ ಅವರು ಶಿವಮೊಗ್ಗ ಜಿಪಂನ ನೂತನ ಸಿಇಓ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
