Trending

ಶಿವಮೊಗ್ಗದಲ್ಲಿ ಎನ್‌ಎಸ್‌ಯುಐ ಸಂಘಟನೆಗೆ ಶಕ್ತಿ ತುಂಬಿದ್ದ ಮಧುಸೂದನ್‌ಗೆ ಸೂಡಾ ಅಧ್ಯಕ್ಷ ಸ್ಥಾನ

Spread the love

ಶಿವಮೊಗ್ಗ: ವಿದ್ಯಾರ್ಥಿ ಸಂಘಟನೆ ಎನ್‌ಎಸ್‌ಯುಐ ಮೂಲಕ ಹೋರಾಟದ ಹಾದಿಯಲ್ಲಿ ಪಕ್ಷದ ಸಂಘಟನೆಗೆ ಶಕ್ತಿ ತುಂಬಿ, ಯುವ ನಾಯಕನಾಗಿ ಗುರುತಿಸಿಕೊಂಡಿದ್ದ ಮಧುಸೂದನ್ ಇದೀಗ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಪಕ್ಷದ ಯುವ ನಾಯಕ ಹಾಗೂ ವಿದ್ಯಾರ್ಥಿ ಸಂಘಟನೆಯ ಪ್ರಮುಖರಾಗಿ ಮಧುಸೂದನ್ ಅವರು ಹಲವು ವರ್ಷಗಳಿಂದ ಪಕ್ಷದ ಸಂಘಟನೆಗಾಗಿ ಸದ್ದಿಲ್ಲದೆ ಶ್ರಮಿಸಿದ್ದಾರೆ.

ಯುವಕರನ್ನು ಸಂಘಟಿಸುವುದು, ವಿದ್ಯಾರ್ಥಿಗಳ ಸಮಸ್ಯೆಗಳ ಪರವಾಗಿ ಧ್ವನಿ ಎತ್ತುವುದು ಸೇರಿದಂತೆ ವಿವಿಧ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಹಿರಿಯ ಕಾಂಗ್ರೆಸ್ ಮುಖಂಡರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಮಧುಸೂದನ್, ಪಕ್ಷದ ಸಂಘಟನೆಗೆ ನೀಡಿದ ಕೊಡುಗೆ ಹಾಗೂ ನಿರಂತರ ಶ್ರಮದ ಹಿನ್ನೆಲೆಯಲ್ಲಿ ಇದೀಗ ಪ್ರತಿಷ್ಠಿತ ಸೂಡಾ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

ಗಿರಿಜಮ್ಮ ಟೀಚರ್ ಅವರ ಪುತ್ರರಾಗಿರುವ ಮಧುಸೂದನ್ ಅವರಿಗೆ ಕಾಂಗ್ರೆಸ್ ಪಕ್ಷ ನೀಡಿರುವ ಈ ಜವಾಬ್ದಾರಿ ಪಕ್ಷದ ಯುವ ಕಾರ್ಯಕರ್ತರು ಹಾಗೂ ಬೆಂಬಲಿಗರಲ್ಲಿ ಸಂತಸ ಮೂಡಿಸಿದೆ.

ಯುವ ಕಾಂಗ್ರೆಸ್, ಎನ್‌ಎಸ್‌ಯುಐ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಮಧುಸೂದನ್ ಅವರ ಆಯ್ಕೆಯನ್ನು ಸ್ವಾಗತಿಸಿ ಅಭಿನಂದಿಸಿದ್ದಾರೆ.

ಸೂಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಮಧುಸೂದನ್ ಅವರು ನಗರಾಭಿವೃದ್ಧಿ ಕ್ಷೇತ್ರದಲ್ಲಿ ಯಾವ ರೀತಿಯ ಕಾರ್ಯಯೋಜನೆಗಳನ್ನು ರೂಪಿಸಲಿದ್ದಾರೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

[pj-news-ticker]