Trending

ಶಿವಮೊಗ್ಗ: ಮೆಕ್ಕೆಜೋಳ ಕಟಾವು ವೇಳೆ ಹೆಜ್ಜೇನು ದಾಳಿ, ರೈತ ಸಾವು

Spread the love

ಶಿವಮೊಗ್ಗ: ತಾಲೂಕಿನ ದುಮ್ಮಳ್ಳಿ ಗ್ರಾಮದ ಜಮೀನಿನಲ್ಲಿ ಮೆಕ್ಕೆಜೋಳ ಕಟಾವು ಮಾಡುವಾಗ ಹೆಜ್ಜೇನುಗಳು ಏಕಾಏಕಿ ದಾಳಿ ನಡೆಸಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಗರದ ಹೊರವಲಯದ ಮಲವಗೊಪ್ಪದಲ್ಲಿ ನಡೆದಿದೆ.

ಮಲವಗೊಪ್ಪದ ನಿವಾಸಿ ತಿಮ್ಮನಾಯ್ಕ ಮೃತಪಟ್ಟ ರೈತ. ಬುಧವಾರ ಸಂಜೆ ಅವರು ತಮ್ಮ ಜಮೀನಿನಲ್ಲಿ ಮೆಕ್ಕೆಜೋಳ ಕಟಾವು ಮಾಡುವ ಕೆಲಸದಲ್ಲಿ ನಿರತರಾಗಿದ್ದಾಗ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿವೆ.

ಹೆಜ್ಜೇನುಗಳ ದಾಳಿಯಿಂದ ತೀವ್ರವಾಗಿ ಅಸ್ವಸ್ಥಗೊಂಡ ತಿಮ್ಮನಾಯ್ಕ ಅವರನ್ನು ಕುಟುಂಬಸ್ಥರು ಹಾಗೂ ಸ್ಥಳೀಯರು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

[pj-news-ticker]