Trending

ಜನವರಿಯಲ್ಲಿ ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯತ್​ ಚುನಾವಣೆಗಳು ನಡೆಯಬಹುದು: ಸಚಿವ ಈಶ್ವರ್​​​ ಖಂಡ್ರೆ

Spread the love

ಶಿವಮೊಗ್ಗ: ಗ್ರಾಮ ಪಂಚಾಯತ್​, ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್​​ ಚುನಾವಣೆಗಳು ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ನಡೆಯಬಹುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಈಶ್ವರ್​ ಖಂಡ್ರೆ ಹೇಳಿದರು.

ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯ ಸರ್ಕಾರ ಈಗಾಗಲೇ ಸ್ಥಳೀಯ ಸಂಸ್ಥೆಯ ಚುನಾವಣೆಗಳನ್ನು ನಡೆಸಬೇಕೆಂದು ಕ್ಯಾಬಿನೆಟ್​​ನಲ್ಲಿ ತೀರ್ಮಾನ ಮಾಡಿದೆ.

ಚುನಾವಣೆಗಾಗಿ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಿದ್ದೇವೆ. ಆಕ್ಷೇಪಣೆಗೆ ಸಮಯಾವಕಾಶ ನೀಡಲಾಗಿತ್ತು. ಇದಕ್ಕಾಗಿ ಸಾವಿರಾರು ಅರ್ಜಿಗಳು ಬಂದಿವೆ. ಸುಮಾರು 1,800 ಅರ್ಜಿಗಳು ಬಂದಿವೆ.

ಒಂದು ವಾರದ ಒಳಗಾಗಿ ಎಲ್ಲಾ ಆಕ್ಷೇಪಣೆಗಳನ್ನು ಪರಿಶೀಲಿಸಿ, ಅಂತಿಮವಾಗಿ ಮೀಸಲಾತಿ ಪಟ್ಟಿಯನ್ನು ಈ ತಿಂಗಳ‌ ಒಳಗಾಗಿ ಬಿಡುಗಡೆ ಮಾಡಲಿದ್ದೇವೆ ಎಂದರು.

ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ‌ ಸಲ್ಲಿಸುತ್ತೇವೆ. ನಂತರ ರಾಜ್ಯ ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಲಿದೆ.

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತದಾರರ ಪಟ್ಟಿ ತಯಾರು ಮಾಡಿ, ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆಸಲಾಗುತ್ತದೆ.

ಚುನಾವಣಾ ಆಯೋಗಕ್ಕೆ ಈ ಎಲ್ಲಾ ತಯಾರಿಗೆ ಒಂದೂವರೆ ತಿಂಗಳ ಕಾಲಾವಧಿ ಬೇಕಾಗುತ್ತದೆ. ಇದರಿಂದ ಜನವರಿ ಮೊದಲ ಅಥವಾ ಎರಡನೇ ವಾರದ ಒಳಗೆ ಚುನಾವಣೆಗಳು ನಡೆಯುತ್ತವೆ ಎಂದು ತಿಳಿಸಿದರು.

[pj-news-ticker]