Trending

ದರ್ಶನ್ ಪತ್ನಿ ವಿಜಯಲಕ್ಷ್ಮಿ, ನಟ ಧನ್ವೀರ್ ವಿರುದ್ಧ ₹10 ಕೋಟಿ ನಗದು ವ್ಯವಹಾರದ ಆರೋಪ: ED, IT ಇಲಾಖೆಗೆ ದೂರು

Spread the love

ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಹಾಗೂ ನಟ ಧನ್ವೀರ್ ಗೌಡ ನಡುವೆ ₹10 ಕೋಟಿ ನಗದು ವ್ಯವಹಾರ ನಡೆದಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ED) ಮತ್ತು ಆದಾಯ ತೆರಿಗೆ (IT) ಇಲಾಖೆಗೆ ವಕೀಲ ಪ್ರಶಾಂತ್ ಮೆಥಲ್ ದೂರು ಸಲ್ಲಿಸಿದ್ದಾರೆ.

ದರ್ಶನ್ ಅವರ ಕಾನೂನು ಹೋರಾಟಕ್ಕಾಗಿ ವಿಜಯಲಕ್ಷ್ಮಿ ಮತ್ತು ಧನ್ವೀರ್ ನಡುವೆ ಹಣ ವರ್ಗಾವಣೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಹಣಕಾಸಿನ ವ್ಯವಹಾರದ ಕುರಿತು ಸಮಗ್ರ ತನಿಖೆ ನಡೆಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

ದೂರಿನ ಪ್ರಕಾರ, ₹10 ಕೋಟಿ ಮೊತ್ತದ ವ್ಯವಹಾರಕ್ಕೆ ಸಂಬಂಧಿಸಿದಂತೆ ಹಣದ ಮೂಲ ಹಾಗೂ ಅದರ ಉದ್ದೇಶದ ಬಗ್ಗೆ ತನಿಖೆ ನಡೆಸಬೇಕೆಂದು ದೂರುದಾರರು ಒತ್ತಾಯಿಸಿದ್ದಾರೆ. ಈ ಹಣಕಾಸಿನ ವ್ಯವಹಾರವೇ ವಿಜಯಲಕ್ಷ್ಮಿ ಮತ್ತು ಧನ್ವೀರ್ ನಡುವಿನ ಗಲಾಟೆಗೆ ಕಾರಣವಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಸಾಮಾನ್ಯ ಜನರಿಂದ ಹಿಡಿದು ಶ್ರೀಮಂತರವರೆಗೆ ಎಲ್ಲರಿಗೂ ಕಾನೂನು ಒಂದೇ ಆಗಿದ್ದು, ಈ ಪ್ರಕರಣದಲ್ಲಿಯೂ ಕಾನೂನು ಪ್ರಕ್ರಿಯೆಯಂತೆ ಸಮಗ್ರ ತನಿಖೆ ನಡೆಯಬೇಕು ಎಂದು ವಕೀಲ ಪ್ರಶಾಂತ್ ಮೆಥಲ್ ತಿಳಿಸಿದ್ದಾರೆ.

[pj-news-ticker]