Trending

ಆನವೇರಿಯಲ್ಲಿ ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ: ಯುವಕನಿಗೆ ಚಾಕು ಇರಿತ, ನಾಲ್ವರು ಬಂಧನ

Spread the love

ಭದ್ರಾವತಿ: ತಾಲೂಕಿನ ಆನವೇರಿ ಗ್ರಾಮದಲ್ಲಿ ತಡರಾತ್ರಿ ಕುರಿ ಕಾಳಗದ ವೇಳೆ ನಡೆಯುತ್ತಿದ್ದ ಜೂಜಾಟದ ಸಂದರ್ಭದಲ್ಲಿ ಗಲಾಟೆ ಸಂಭವಿಸಿ ಯುವಕನೊಬ್ಬ ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಸುನಿಲ್ ಎಂಬ ಯುವಕ ಹಾಗೂ ಶಿವಮೊಗ್ಗ ನಗರದ ಟಿಪ್ಪು ನಗರದ ಕೆಲ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದೆ. ಈ ವೇಳೆ ಸುನಿಲ್‌ಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಗಂಭೀರವಾಗಿ ಗಾಯಗೊಂಡ ಸುನಿಲ್ ಅವರನ್ನು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಶಂಕಿತ ಯುವಕರನ್ನು ಬಂಧಿಸಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗಲಾಟೆಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

[pj-news-ticker]