Trending

ಶಿಕಾರಿಪುರ: ಖಾಸಗಿ ಬಸ್ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು

Spread the love

ಶಿವಮೊಗ್ಗ: ಶಿಕಾರಿಪುರ ಪಟ್ಟಣದ ಗಣಪತಿ ದೇವಸ್ಥಾನದ ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಶಿಕಾರಿಪುರ ತಾಲೂಕಿನ ಕುಸ್ಕೂರು ಗ್ರಾಮದ ಚಂದ್ರನಾಯ್ಕ್ (41) ಎಂದು ಗುರುತಿಸಲಾಗಿದೆ.

ಚಂದ್ರನಾಯ್ಕ್ ಅವರು ಶಿಕಾರಿಪುರದಿಂದ ತಮ್ಮ ಗ್ರಾಮ ಕುಸ್ಕೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಶಿರಾಳಕೊಪ್ಪದಿಂದ ಶಿಕಾರಿಪುರದ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಎದುರಿನಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್‌ನಿಂದ ಬಿದ್ದ ಚಂದ್ರನಾಯ್ಕ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

[pj-news-ticker]