Trending

ಶಿರಾಳಕೊಪ್ಪ ರಸ್ತೆಯಲ್ಲಿ ಭೀಕರ ಅಪಘಾತ : ಯುವಕನ ದುರಂತ ಅಂತ್ಯ

Spread the love

ಶಿವಮೊಗ್ಗ: ಶಿರಾಳಕೊಪ್ಪ–ಆನವಟ್ಟಿ ಮಾರ್ಗದ ಜಾವಗಟ್ಟಿ ಮತ್ತು ಬೆಳ್ಳಿಗಾವಿ ನಡುವಿನ ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 22 ವರ್ಷದ ಯುವಕ ದಾರುಣವಾಗಿ ಮೃತಪಟ್ಟಿದ್ದಾರೆ.

ಲಿಂಗರಾಜ್ ಮೃತ ಯುವಕ. ಶುಕ್ರವಾರ ಬೆಳಿಗ್ಗೆ ಮಾರುತಿ 800 ಕಾರಿನಲ್ಲಿ ಶಿರಾಳಕೊಪ್ಪದಿಂದ ಆನವಟ್ಟಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಎದುರು ದಿಕ್ಕಿನಿಂದ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಲಿಂಗರಾಜ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

[pj-news-ticker]