Trending

ಬಿ.ವಿ.ಆಚಾರ್ಯ, ಕಾಗೋಡು ತಿಮ್ಮಪ್ಪ, ಜಿಮ್‌ ರವಿ ಸೇರಿ 71 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

Spread the love

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ 71 ಸಾಧಕರಿಗೆ 2026ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು  ಕರ್ನಾಟಕ ಸರ್ಕಾರ ಘೋಷಿಸಿದೆ.

ಹಿರಿಯ ವಕೀಲ, ಕಾನೂನು ತಜ್ಞ ಬಿ.ವಿ.ಆಚಾರ್ಯ, ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ, ಖ್ಯಾತ ದೇಹದಾರ್ಢ್ಯ ಪಟು ಜಿಮ್‌ ರವಿ ಸೇರಿ 71 ಸಾಧಕರು ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ ಪ್ರತಿ ವರ್ಷವು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಸಂಪ್ರದಾಯವನ್ನು ಸರ್ಕಾರವು ಅನುಸರಿಸಿಕೊಂಡು ಬಂದಿರುತ್ತದೆ.

ಅದರಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ 2026ನೇ ಸಾಲಿನಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲು ಸರ್ಕಾರವು ನಿರ್ಧರಿಸಿದೆ. ಪ್ರಶಸ್ತಿಯು 25 ಗ್ರಾಂ ಚಿನ್ನದ ಪದಕ ಹಾಗೂ 5 ಲಕ್ಷ ನಗದನ್ನು ಒಳಗೊಂಡಿರುತ್ತದೆ.

[pj-news-ticker]