Trending

ಡಿವಿಎಸ್ ಕಾಲೇಜಿನಲ್ಲಿ ‘ನಶಾಮುಕ್ತ ಯುವ ವಿಕಸಿತ ಭಾರತ’ ಜಾಗೃತಿ ಕಾರ್ಯಕ್ರಮ

Spread the love

ಶಿವಮೊಗ್ಗ: ರಾಷ್ಟ್ರೀಯ ಸೇವಾ ಯೋಜನೆ, ಕುವೆಂಪು ವಿಶ್ವವಿದ್ಯಾಲಯದ ವತಿಯಿಂದ  ನಗರದ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಘಟಕ 1, 2 ಮತ್ತು 3 ಹಾಗೂ ಮೈ ಭಾರತ್ ಸಹಯೋಗದಲ್ಲಿ ‘ನಶಾಮುಕ್ತ ಯುವ ವಿಕಸಿತ ಭಾರತ’ ಜಾಗೃತಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿ ತಿಮ್ಮೇಶಪ್ಪ ಮಾತನಾಡಿ, ಯುವಜನತೆ ಮಾದಕ ವಸ್ತುಗಳಿಂದ ದೂರವಿರಬೇಕು. ಮಾದಕ ವಸ್ತುಗಳ ಸೇವನೆಯಿಂದ ದಾಸ್ಯಕ್ಕೆ ಒಳಗಾಗುವ ಜೊತೆಗೆ ಭವಿಷ್ಯವೂ ಕತ್ತಲೆಯಾಗುತ್ತದೆ ಎಂದು ಎಚ್ಚರಿಸಿದರು.

ಯುವ ಅಧಿಕಾರಿ ಐಶ್ವರ್ಯ ಶ್ರೀನಿವಾಸ್ ಮಾತನಾಡಿ, ವಿದ್ಯಾರ್ಥಿಗಳು ಓದು ಮತ್ತು ಹೊಸ ವಿಷಯಗಳ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಪ್ರೊ. ಕುಮಾರಸ್ವಾಮಿ ಮಾತನಾಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳನ್ನು ಸಮಾಜಮುಖಿಯಾಗಿ ರೂಪಿಸಲು ಸಹಕಾರಿಯಾಗಿದ್ದು, ಕೆಟ್ಟ ಚಟಗಳಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮಾಧಿಕಾರಿ ಡಾ. ಡಿ.ಬಿ. ಶಿವರುದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, 100 ವಾರಗಳ ಯುವ ಜಾಗೃತಿ ಸಂಕಲ್ಪದಡಿ ನಡೆಯುತ್ತಿರುವ ಈ ಅಭಿಯಾನವು ಯುವಜನರಲ್ಲಿ ನಶಾಮುಕ್ತ ಜೀವನದ ಅರಿವು ಮೂಡಿಸುವ ಉದ್ದೇಶ ಹೊಂದಿದೆ ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸ, ಪ್ರತಿಜ್ಞಾವಿಧಿ ಹಾಗೂ ಜಾಗೃತಿ ಜಾಥಾ ನಡೆಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು.

[pj-news-ticker]