ಶಿವಮೊಗ್ಗ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಪ್ರಕಾಶ್ ಜಿ.ಟಿ. ನಿಟಳಿ ಅವರನ್ನು ನೇಮಕ ಮಾಡಿದೆ.
ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಕಮಿಷನರ್ ಆಗಿ ನೇಮಿಸಲಾಗಿದೆ. ಅವರು 2026ರ ಜನವರಿಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು.
ಇದುವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರಾಗಿದ್ದ ಪ್ರಕಾಶ್ ಜಿ.ಟಿ. ನಿಟಳಿ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
