Trending

ಶಿವಮೊಗ್ಗ : ವಿದ್ಯುತ್ ತಂತಿ ತುಳಿದು 13 ವರ್ಷದ ಕಾಡಾನೆ ಸಾವು : ಗದ್ದೆಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿದ್ದ ಜಮೀನು ಮಾಲೀಕ ವಶಕ್ಕೆ

Spread the love

ಶಿವಮೊಗ್ಗ: ಬೆಳೆ ರಕ್ಷಣೆಗಾಗಿ ಗದ್ದೆಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು 13 ವರ್ಷದ ಕಾಡಾನೆಯೊಂದು ಮೃತಪಟ್ಟ ಘಟನೆ ಗಾಜನೂರು ಸಮೀಪದ ಈಚಲವಾಡಿ ಗ್ರಾಮದಲ್ಲಿ ನಡೆದಿದೆ.

ಶಂಕರ ವಲಯ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಆಹಾರ ಅರಸಿ ಕಾಡಿನಿಂದ ಗ್ರಾಮಕ್ಕೆ ಬಂದಿದ್ದ ಆನೆ, ಗದ್ದೆಯ ಸುತ್ತ ಅಕ್ರಮವಾಗಿ ಎಳೆದಿದ್ದ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿದೆ.

ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಮೀನಿನ ಮಾಲೀಕ ಸಯ್ಯದ್ ಅಲಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ವಿದ್ಯುತ್ ತಂತಿ ಅಳವಡಿಸಿದ್ದಾಗಿ ಅವರು ಒಪ್ಪಿಕೊಂಡಿದ್ದಾರೆ.

ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ ತಿಳಿಸಿದ್ದಾರೆ.

 

[pj-news-ticker]