ಶಿವಮೊಗ್ಗ: ರಸ್ತೆ ದಾಟಲು ನಿಂತಿದ್ದ ವೃದ್ಧರೊಬ್ಬರಿಗೆ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದ ಹರಿಗೆಯ ಬಿ.ಹೆಚ್. ರಸ್ತೆಯಲ್ಲಿ ನಡೆದಿದೆ.
ಹರಿಗೆ ನಿವಾಸಿ ಜಯಣ್ಣ (62) ಮೃತಪಟ್ಟವರು.
ಜಯಣ್ಣ ಅವರು ಬಿ.ಹೆಚ್. ರಸ್ತೆಯಲ್ಲಿ ರಸ್ತೆ ದಾಟಲು ಬದಿಯಲ್ಲಿ ನಿಂತಿದ್ದ ವೇಳೆ ವೇಗವಾಗಿ ಬಂದ ಬೈಕ್ ಏಕಾಏಕಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಜಯಣ್ಣ ಅವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುವ ಮುನ್ನವೇ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನೆ ತಿಳಿಯುತ್ತಿದ್ದಂತೆಯೇ ಶಿವಮೊಗ್ಗ ಪೂರ್ವ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಕ್ ಸವಾರನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
