Trending

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ – ಸಾರಿಗೆ ಸಂಸ್ಥೆ ಚಾಲಕ ಕಂ ನಿರ್ವಾಹಕನ ಆಸ್ತಿ ದಾಖಲೆಗಳ ಪರಿಶೀಲನೆ

Spread the love

ಹುಬ್ಬಳ್ಳಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಚಾಲಕ ಕಂ ನಿರ್ವಾಹಕನ ಮನೆ ಸೇರಿದಂತೆ ಮೂರು ನಿವಾಸಗಳ ಮೇಲೆ ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿ ನಗರ ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗೋಕುಲ ರಸ್ತೆ ಮೊರಾರ್ಜಿ ನಗರದ ಷಡಕ್ಷರಯ್ಯ ಅತ್ತಿಕಟ್ಟಿಮಠ ಅವರಿಗೆ ಸೇರಿದ ಮನೆ ಹಾಗೂ ಇತರೆ ಎರಡು ನಿವಾಸಗಳಲ್ಲಿ ಅಧಿಕಾರಿಗಳು ಏಕಕಾಲಕ್ಕೆ ಪರಿಶೀಲನೆ ನಡೆಸಿದ್ದಾರೆ.

ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಧಿಕಾರಿಗಳು ಚರ ಮತ್ತು ಸ್ಥಿರ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳು, ಹಣಕಾಸಿನ ವ್ಯವಹಾರಗಳು ಹಾಗೂ ಇತರೆ ಮಾಹಿತಿಗಳನ್ನು ಪರಿಶೀಲಿಸುತ್ತಿದ್ದಾರೆ.

ಸಾರಿಗೆ ಸಂಸ್ಥೆಯ ನೌಕರರೊಂದಿಗೆ ರಿಯಲ್ ಎಸ್ಟೇಟ್ ಹಾಗೂ ಬಡ್ಡಿ ವ್ಯವಹಾರ ನಡೆಸುತ್ತಿದ್ದರು ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಆದಾಯದ ಮೂಲ ಮತ್ತು ಸಂಪಾದಿಸಿರುವ ಆಸ್ತಿಗಳ ಕುರಿತು ಲೋಕಾಯುಕ್ತ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

[pj-news-ticker]