Trending

ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ ಗೆ ಇ.ಡಿ ಸಮನ್ಸ್

Spread the love

ಹೈದರಾಬಾದ್: ಹೈದರಾಬಾದ್‌ ಕ್ರಿಕೆಟ್‌ ಸಂಸ್ಥೆಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್‌ ಮುಖಂಡ ಮೊಹಮ್ಮದ್‌ ಅಜರುದ್ದೀನ್‌ ಅವರಿಗೆ ಜಾರಿ ನಿರ್ದೇಶನಾಲಯ ಇಂದು ಸಮನ್ಸ್‌ ಜಾರಿ ಮಾಡಿದೆ.

ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ 20 ಕೋಟಿ ಅವ್ಯವಹಾರ ನಡೆದಿದೆ ಎನ್ನಲಾಗಿದು ಈ ಕುರಿತು ತೆಲಂಗಾಣದ ಎಸಿಬಿ ಎಫ್ ಐಆರ್ ದಾಖಲು ಮಾಡಿತ್ತು ಇದರ ಆಧಾರದ ಮೇಲೆ ಇಡಿ ಪ್ರಕರಣ ದಾಖಲು ಮಾಡಿಕೊಂಡಿದೆ.ಇಡಿ ಅಧಿಕಾರಿಗಳ ಮುಂದೆ ಅಜರುದ್ದೀನ್ ಹಾಜರಾಗಲಿದ್ದಾರೆ.

ಅಜರುದ್ದೀನ್ ಅವರು ಸೆಪ್ಟೆಂಬರ್ 2019 ರಲ್ಲಿ ಹೈದರಾಬಾದ್ ಕ್ರಿಕೆಟ್ ಸಂಸ್ಥೆ (HCA) ಅಧ್ಯಕ್ಷರಾಗಿ ಆಯ್ಕೆಯಾದರು. ಈ ನಡುವೆ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣದಲ್ಲಿ ಹಣಕಾಸಿನ ಅಕ್ರಮ ಎಸಗಿದ್ದಾರೆ. ಖಾಸಗಿ ಕಂಪನಿಗಳಿಗೆ ಹೆಚ್ಚಿನ ದರದಲ್ಲಿ ಗುತ್ತಿಗೆ ನೀಡಿ ಕೋಟ್ಯಂತರ ರೂಪಾಯಿ ನಷ್ಟ ಉಂಟು ಮಾಡಿದ್ದಾರೆ ಎನ್ನಲಾಗಿದೆ ಅಲ್ಲದೆ ಇದಕ್ಕೆ ಸಂಬಂಧಿಸಿ ಮೂರೂ ಎಫ್‌ಐಆರ್‌ಗಳನ್ನು ದಾಖಲು ಮಾಡಲಾಗಿತ್ತು ಎನ್ನಲಾಗಿದೆ

[pj-news-ticker]