ಆನಂದಪುರ: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾದ ಘಟನೆ ಆನಂದಪುರ ಪೊಲೀಸ್ ಸ್ಟೇಷನ್ ಮುಂಭಾಗ ಇಂದು ಮಧ್ಯಾಹ್ನ ನಡೆದಿದೆ.
ಶಿವಮೊಗ್ಗದಿಂದ ಸಾಗರ ಕಡೆಗೆ ಕುಟುಂಬವೊಂದು ಕಾರಿನಲ್ಲಿ ತೆರಳುತ್ತಿದ್ದು, ಚಾಲಕ ಮೂತ್ರ ವಿಸರ್ಜನೆ ಮಾಡಲು ರಸ್ತೆಯ ಬದಿ ಕಾರು ನಿಲ್ಲಿಸಿ ಇಳಿಯುತ್ತಿರುವ ಸಂದರ್ಭ ಸಾಗರ ಕಡೆಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರು, ಈಗಾಗಲೇ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿದೆ.
ಪಲ್ಟಿಯಾದ ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಪ್ರಕರಣವನ್ನು ಆನಂದಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
