Trending

ಕೇಂದ್ರ ಸರಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಇಲ್ಲ : ಡಾ.ಜಿತೇಂದ್ರ ಸಿಂಗ್‌

Spread the love

ಹೊಸದಿಲ್ಲಿ: ಕೇಂದ್ರ ಸರಕಾರಿ ನೌಕರರ ನಿವೃತ್ತಿ ವಯಸ್ಸಿನಲ್ಲಿ ಏರಿಕೆ ಮಾಡುವ ಇರಾದೆ ಸರಕಾರ ಮುಂದೆ ಇಲ್ಲ ಎಂದು ಲೋಕಸಭೆಗೆ ಮಾಹಿತಿ ನೀಡಲಾಗಿದೆ. ಸದನಕ್ಕೆ ಲಿಖಿತ ಉತ್ತರ ನೀಡಿದ ಸಿಬ್ಬಂದಿ ಖಾತೆ ಸಹಾಯಕ ಸಚಿವ ಡಾ.ಜಿತೇಂದ್ರ ಸಿಂಗ್‌ ಅವರು, ಸದ್ಯ ನಿವೃತ್ತಿ ವಯಸ್ಸು 60 ಇದೆ. ಅದನ್ನು ಬದಲಾವಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ನೌಕರರ ನಿವೃತ್ತಿ ವಯಸ್ಸು ಏರಿಕೆ ಮಾಡಲಾಗುತ್ತದೆ ಎಂದು ಕೇಳಲಾಗಿದ್ದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದ್ದಾರೆ. ಇದರ ಜತೆಗೆ ನಾಗರಿಕ ಸೇವೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಯುವ ಜನರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ತೆರವಾಗಿರುವ ಹುದ್ದೆಗಳಿಗೆ ನೇಮಕ ನಡೆಸಲು ಸಚಿವಾಲಯಗಳಿಗೆ ಸೂಚನೆ ನೀಡಲಾಗಿದೆ ಎಂದರು.

[pj-news-ticker]