Trending

ತೀರ್ಥಹಳ್ಳಿ : ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

Spread the love

ತೀರ್ಥಹಳ್ಳಿ: ಯುವಕನೋರ್ವ ವಾರಳ್ಳಿ ಬಳಿ ನದಿಗೆ ಹಾರಿ ಪ್ರಾಣ ಕಳೆದುಕೊಂಡ ಘಟನೆ ಇಂದು ನಡೆದಿದೆ.

ಕಾಲೇಜೊಂದರಲ್ಲಿ ಡಿಗ್ರಿ ಓದುತ್ತಿದ್ದ, ತಾಲೂಕಿನ ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರಳ್ಳಿಯ ಧ್ರುವ (20) ವಾರಳ್ಳಿ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಮೃತನು ವಾರಳ್ಳಿ ದಿನೇಶ್ ಅವರ ಮಗ ಎಂದು ತಿಳಿದು ಬಂದಿದೆ. ಮುಳುಗು ತಜ್ಞ ಕುರುವಳ್ಳಿ ಪ್ರಮೋದ್ ಪೂಜಾರಿ ಮೃತ ದೇಹವನ್ನು ಹೊರ ತರುವಲ್ಲಿ ಯಶಸ್ವಿಯಾಗಿದ್ದು, ಆಗುಂಬೆ ಪೊಲೀಸ್ ಠಾಣೆ ಪಿ.ಎಸ್.ಐ. ರಂಗನಾಥ್ ಅಂತರಗಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

[pj-news-ticker]