Trending

ಸಿಟಿ ರವಿ ವಿರುದ್ಧ ಎಫ್​ಐಆರ್​ – ಬಂಧನ ಸಾಧ್ಯತೆ ?

Spread the love

ಬೆಳಗಾವಿ : ಸದನದೊಳಿಗೆ ಅಶ್ಲೀಲ ಪದಿಂದ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇಲೆಗೆ ಬಿಜೆಪಿ ಎಂಎಲ್ಸಿ ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಅವಾಚ್ಯಪದ ಬಳಕೆ ಆರೋಪದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮದೇ ಲೆಟರ್‌ಹೆಡ್ ಮೇಲೆ ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು ಬರೆದುಕೊಟ್ಟಿದ್ದಾರೆ. ಈ ದೂರಿನ ಮೇರೆಗೆ ಇದೀಗ ಸಿಟಿ ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಹೀಗಾಗಿ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆಗಳಿವೆ.

ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಕೇಸ್ ದಾಖಲಾಗಿದ್ದು. ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ.

ಈ ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ಇದೀಗ ಹಿರೇಬಾಗೇವಾಡಿ ಪೊಲೀಸರು, ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಬಂಧಿಸುವ ಸಾಧ್ಯತೆಗಳಿವೆ. ಸದ್ಯ ಸುವರ್ಣ ಸೌಧದಲ್ಲೇ ಇರುವ ಸಿಟಿ ರವಿ ಅವರನ್ನು ಯಾವುದೇ ಸಂದರ್ಭದಲ್ಲೂ ಬಂಧಿಸಬಹುದು.

[pj-news-ticker]