ಹುಬ್ಬಳ್ಳಿ : ನಗರದ ಅಯ್ಯಪ್ಪ ಮಾಲಾಧಾರಿಗಳ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಒಂಬತ್ತು ಜನರ ಪೈಕಿ ಒಬ್ಬೊಬ್ಬರೆ ಪ್ರಾಣ ಬಿಡುತ್ತಿದ್ದಾರೆ. ಹೀಗಾಗಿ ಸದ್ಯ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಈ ಮಧ್ಯೆ 22 ವರ್ಷದ ಹಿಂದೆ ನಿರ್ಮಿಸಿದ್ದ ಅಯ್ಯಪ್ಪ ಸನ್ನಿಧಿ ನೆಲಸಮಕ್ಕೆ ನಿರ್ಧಾರ ಮಾಡಲಾಗಿದೆ.
ನಗರದ ಅಚ್ಚವ್ವನ ಕಾಲೋನಿಯಲ್ಲಿ 22 ವರ್ಷದ ಹಿಂದೆ ಅಯ್ಯಪ್ಪ ಸನ್ನಿಧಿ ನಿರ್ಮಿಸಲಾಗಿತ್ತು. ಗಜಾನನ ಜಿತೂರಿ ಸ್ವಾಮೀಜಿ ಅವರು ಈ ಸನ್ನಿಧಿ ನಿರ್ಮಿಸಿದ್ದರು. ಇದೀಗ ಘಟನೆಯಿಂದ ಮನನೊಂದಿರುವ ಗಜಾನನ ಜಿತೂರಿ ಸ್ವಾಮೀಜಿ, ಅಯ್ಯಪ್ಪ ಸ್ವಾಮಿ ಸನ್ನಿಧಿ ನೆಲಸಮ ಮಾಡಲು ನಿರ್ಧರಿಸಿದ್ದಾರೆ. ಆ ಸನ್ನಿಧಿ ನೋಡುವುದಕ್ಕೆ ಆಗಲ್ಲ ಎಂದು ಕಣ್ಣೀರು ಹಾಕಿದ್ದು, ಏರಿಯಾದ ಜನರಿಗೆ ಹೇಳಿ ಸನ್ನಿಧಿ ತೆರವು ಮಾಡುತ್ತೇನೆ ಎನ್ನುತ್ತಿದ್ದಾರೆ.
