ಬೆಂಗಳೂರು : ಚೀನಾದಲ್ಲಿ HMPV ವೈರಸ್ ಹಾವಳಿ ಹೆಚ್ಚಾಗಿರುವ ಬೆನ್ನಲ್ಲೆ ರಾಜ್ಯದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 8 ತಿಂಗಳ ಮಗುವಿನಲ್ಲಿ ಶಂಕಿತ HMPV ವೈರಸ್ ಲಕ್ಷಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು 12.30 ಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಲಿದ್ದಾರೆ.
ಹೌದು ಇಂದು ಮಧ್ಯಾಹ್ನ 12:30ಕ್ಕೆ ಆರೋಗ್ಯ ಸೌಧದಲ್ಲಿ ತುರ್ತು ಸಭೆಯನ್ನು ಕರೆದಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಗಳ ಜೊತೆಗೆ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ ನಡೆಸಲಿದ್ದಾರೆ. ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಈ ಬಗ್ಗೆ ಸಚಿವ ದಿನಶ್ ಗುಂಡೂರಾವ್ ಅವರು ಅಧಿಕಾರಿಗಳ ಜೊತೆಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
8 ತಿಂಗಳ ಮಗುವಿನಲ್ಲಿ HMPV ವೈರಸ್ ಪತ್ತೆ!
ಚೀನಾದಲ್ಲಿ ಅಬ್ಬರಿಸುತ್ತಿರುವ ಎಚ್ ಎಂ ಪಿ ವಿ ಮಾರಕ ವೈರಸ್ ಇದೀಗ ಭಾರತಕ್ಕೂ ಲಗ್ಗೆಯಿಟಿದ್ದು, ಇಂದು ರಾಜ್ಯದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ವೈರಸ್ ಪತ್ತೆಯಾಗಿದೆ.ಮಗುವಿಗೆ ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ಮಗುವಿಗೆ ರಕ್ತ ಪರೀಕ್ಷೆ ಮಾಡಿಸಲಾಗಿದೆ. ಈ ವೇಳೆ ಸೋಂಕು ಇರುವುದು ದೃಢಪಟ್ಟಿದೆ.
