ಶಿವಮೊಗ್ಗ: ನಿನ್ನೆ ಅನಾರೋಗ್ಯದಿಂದ ನಿಧನರಾದ ಹಿರಿಯ ಸಾಹಿತಿ ನಾ.ಡಿಸೋಜ(87) ಅವರ ಪಾರ್ಥೀವ ಶರೀರವನ್ನು ಸಾಗರಕ್ಕೆ ಮಂಗಳೂರಿನಿಂದ ತರಲಾಗಿದ್ದು, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ನಾ.ಡಿಸೋಜ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆದರು.
ಇನ್ನೂ ಇಂದು ಅವರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆ ಬಳಿಕ ಸಾಗರದ ನಗರಸಭೆ ಆವರಣದಲ್ಲಿನ ಗಾಂಧಿ ಮೈದಾನದಲ್ಲೂ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ನಾಳೆ ಹಿರಿಯ ಸಾಹಿತಿ ನಾ.ಡಿಸೋಜ ಅವರ ಪಾರ್ಥೀವ ಶರೀರವನ್ನು ಸಕಲ ಪೊಲೀಸ್ ಗೌರವಗಳೊಂದಿಗೆ ಸಾಗರದಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುತ್ತದೆ.
