Trending

ಮೈಕ್ರೋ ಫೈನಾನ್ಸ್‌ ಕಿರುಕುಳ : ದಾವಣಗೆರೆಯಲ್ಲಿ ತುಂಗಭದ್ರಾ ನದಿಗೆ ಹಾರಿದ ಶಿಕ್ಷಕಿ

Spread the love

ದಾವಣಗೆರೆ: ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಪುಷ್ಪಲತಾ (46) ಆತ್ಮಹತ್ಯೆ ಮಾಡಿಕೊಂಡವರು.

ಮಹಿಳೆಯು ಶಿವಮೊಗ್ಗದ ಟಿಟಿ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಹೊನ್ನಾಳಿ ಪಟ್ಟಣದ ರಾಘವೇಂದ್ರ ದೇವಸ್ಥಾನದ ಬಳಿ ನದಿಗೆ ಹಾರಿ ಜೀವ ಕಳೆದುಕೊಂಡಿದ್ದಾರೆ.

ಶಾಲೆಯಲ್ಲಿ ಗಣರಾಜ್ಯೋತ್ಸವ ಮುಗಿಸಿಕೊಂಡು ಶಿಕ್ಷಕಿ ಮನೆಗೆ ಬಂದಿದ್ದರು. ಈ ವೇಳೆ ಶಿಕ್ಷಕಿಗೆ ಸಾಲ ಕಟ್ಟುವಂತೆ ಫೈನಾನ್ಸ್ ಸಿಬ್ಬಂದಿ ಒತ್ತಡ ಹಾಕಿದ್ದರು ಎನ್ನಲಾಗಿದೆ. ಫೈನಾನ್ಸ್ ಸಿಬ್ಬಂದಿ ಒತ್ತಡಕ್ಕೆ ಬೇಸತ್ತು ಮಹಿಳೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪುಷ್ಪಲತಾ ಪತಿ ಹಾಲೇಶ್ ಕೂಡ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದು, ಮನೆ ಕಟ್ಟಲು ಟಿಟಿ ಕ್ಯಾಪಿಟಲ್ ಫೈನಾನ್ಸ್‌ನಲ್ಲಿ 38 ಲಕ್ಷ ಸಾಲ ಮಾಡಿದ್ದರು. ಸಾಲದ ಕಿರುಕುಳ ಹೆಚ್ಚಾದ ಹಿನ್ನೆಲೆ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ಸಾವಿನ ಕುರಿತು ಪತಿ ಹಾಲೇಶ್ ಹೊನ್ನಾಳಿ ಪೊಲೀಸರಿಗೆ ದೂರು ನೀಡಿದ್ದಾರೆ.

[pj-news-ticker]