Trending

ಭದ್ರಾವತಿ : ಸಂವಿಧಾನದಿಂದಾಗಿ ಈ ದೇಶ ಸದೃಢ – ಸಚಿವ ಸತೀಶ್ ಜಾರಕಿಹೊಳಿ

Spread the love

ಭದ್ರಾವತಿ : ಈ ದೇಶದ ಸಂವಿಧಾನದಿಂದಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಸಮಾನತೆ ಹಾಗೂ ನೆಮ್ಮದಿಯಿಂದ ಬದುಕುವಂತಾಗಿದೆ ಒಂದು ವೇಳೆ ಸಂವಿಧಾನ ರಚನೆಯಾಗದಿದ್ದಲ್ಲಿ ಈ ದೇಶದ ಜನರ ಸ್ಥಿತಿ ಕಲ್ಪಿಸಿಕೊಳ್ಳುವುದು ಅಸಾಧ್ಯವಾಗುತ್ತಿತ್ತು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಅವರು ಇಂದು ಹಳೆ ನಗರದ ಶ್ರೀ ವೀರಶೈವ ಸಭಾಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ವತಿಯಿಂದ ನಡೆದ ಕ.ದ.ಸಂ.ಸ 50 ನೆನಪಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಜಾಗೃತಿ ಸಮಾವೇಶದಲ್ಲಿ ಮಾತನಾಡಿದರು.

ಪ್ರಸ್ತುತ ಸನ್ನಿವೇಶದಲ್ಲಿ ಪ್ರತಿಯೊಬ್ಬರು ಸಂವಿಧಾನವನ್ನು ತಿಳಿದುಕೊಳ್ಳಬೇಕಾಗಿದೆ ಅದಕ್ಕಾಗಿ ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳು ನಡೆಯಬೇಕು ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಅವಶ್ಯಕತೆ ಇದೆ. ರಾಜ್ಯ ಸರ್ಕಾರ ನೀಡಿರುವ ಹಲವಾರು ಕಾರ್ಯಕ್ರಮಗಳನ್ನು ಸುದೀಪ ಪಡಿಸಿಕೊಂಡು ಸಂವಿಧಾನದ ಜಾಗೃತಿ ಕಾರ್ಯಕ್ರಮವನ್ನು ಹೆಚ್ಚಿಸಬೇಕೆಂದು ಈ ಸಂದರ್ಭದಲ್ಲಿ ಅವರು ತಿಳಿಸಿದರು.

ಸಮಾವೇಶದ ದಿವ್ಯ ಸಾನಿಧ್ಯ ವಹಿಸಿದ ಮೈಸೂರು ಉರಿ ಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡಿ, ನಾವೆಲ್ಲರೂ ಸಂವಿಧಾನವನ್ನು ಅರ್ಥೈಸಿಕೊಂಡು ನಂತರ ಸಂವಿಧಾನ ವಿರೋಧಿಗಳಿಗೆ ತಕ್ಕ ಉತ್ತರ ನೀಡುವಂತಾಗಬೇಕು ಸಂವಿಧಾನವನ್ನು ಬದಲಿಸುವ ಮನಸ್ಥಿತಿ ಗಳಿಗೆ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಆರ್ ಸಂದೀಪ್ ಅಧ್ಯಕ್ಷತೆ ವಹಿಸಿದ್ದರು.

ವಿಧಾನಪರಿಷತ್ ಸದಸ್ಯ ಎಚ್.ಪಿ ಸುಧಾಮದಾಸ್, ಮಾಜಿ ಸಂಸದ ಚಂದ್ರಪ್ಪ, ಪ್ರೊಫೆಸರ್ ಬಿ ಕೃಷ್ಣಪ್ಪ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಇಂದಿರಾ ಕೃಷ್ಣಪ್ಪ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ ಪಲ್ಲವಿ, ನಗರಸಭೆ ಅಧ್ಯಕ್ಷ ಎಂ ಮಣಿ, ಎ ಎನ್ ಎಸ್ ಹಿರಿಯ ಸದಸ್ಯ ಬಿಕೆ ಮೋಹನ್,ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಬಿ ಕೆ ಶಿವಕುಮಾರ್, ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಮುಖಂಡರಾದ ಬಿಕೆ ಜಗನ್ನಾಥ್, ಎಸ್ ಕುಮಾರ್, ಬಿಎಸ್ ಗಣೇಶ್, ಸಿ ಜಯಪ್ಪ ,ಕೆ ಎ ರಾಜಕುಮಾರ ಮತ್ತಿತರರು ಉಪಸ್ಥಿತರಿದ್ದರು.

 

[pj-news-ticker]