ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಕೊನೆಯ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾಕ್ಕೆ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ನಿರೀಕ್ಷೆಗೂ ಮೀರಿದ ಆರಂಭ ಒದಗಿಸಿಕೊಟ್ಟಿದ್ದಾರೆ.
ಸಂಜು ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ ಅಭಿಷೇಕ್ ಮೊದಲ ಎಸೆತದಿಂದಲೂ ಹೊಡಿಬಡಿ ಆಟ ಪ್ರದರ್ಶಿಸಿ ಕೇವಲ 37 ಎಸೆತಗಳಲ್ಲಿ ಅಂತರಾಷ್ಟ್ರೀಯ ಟಿ20 ವೃತ್ತಿಜೀವನದ ಎರಡನೇ ಶತಕವನ್ನು ಬಾರಿಸಿದ್ದಾರೆ.
