ಶಿವಮೊಗ್ಗ : ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಉತ್ತಮವಾಗಿರುವಂತೆ ನೋಡಿಕೊಳ್ಳಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಸೂಚಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಅವರು ಶಿಕಾರಿಪುರದ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಉತ್ತಮವಾಗಿರುವಂತೆ ನೋಡಿಕೊಳ್ಳಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಸೂಚಿಸಲಾಗಿದೆ. ಅಲ್ಲದೆ ಪರೀಕ್ಷಾ ಪೂರ್ವ ತರಬೇತಿ ಹಾಗೂ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ ಎಂದರು.
ಪರೀಕ್ಷೆಗಳನ್ನು ನಿಯಮಾನಸಾರ ಕಟ್ಟುನಿಟ್ಟಾಗಿ ನಡೆಸಲು ಸೂಚಿಸಲಾಗಿದೆ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ನಿರ್ಭೀತಿಯಿಂದ ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಿದ ಅವರು ಅನುತ್ತೀರ್ಣ ವಿದ್ಯಾರ್ಥಿಗಳಿಗಾಗಿ ಪೂರಕ ಪರೀಕ್ಷೆಗಳನ್ನು ಕೂಡ ಏರ್ಪಡಿಸಲಾಗಿದೆ ಎಂದರು.
