Trending

ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ‘ASI’ ಪುತ್ರಿ ಆತ್ಮಹತ್ಯೆ.!

Spread the love

ಮಂಡ್ಯ : ಮಂಡ್ಯದಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಎಎಸ್ಐ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಡ್ಯದ ಬಂದೀಗೌಡ ಬಡಾವಣೆ ಸಮೀಪ ಈ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಮಂಡ್ಯದ ಸಶಸ್ತ್ರ ಮೀಸಲು ಪಡೆಯ ಎಎಸ್ ಐ ಅನ್ಸರ್ ಪಾಷಾ ಅವರ ಮಗಳು ಸುಹಾನಾ (19) ಎಂದು ಗುರುತಿಸಲಾಗಿದೆ.

ಸುಹಾನಾ ಮೈಸೂರಿನಲ್ಲಿ ಪ್ರಥಮ ವರ್ಷದ ಬಿಎ ವ್ಯಾಸಂಗ ಓದುತ್ತಿದ್ದು, ಕಾಲೇಜು ಮುಗಿಸಿಕೊಂಡು ಮನೆಗೆ ಬಂದು ಬಂದೀಗೌಡ ಬಡಾವಣೆ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

[pj-news-ticker]