ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನುಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಎರಡು ದಿನಗಳ ತನಿಖೆ, ಮಹಜರು, ಹೇಳಿಕೆ ದಾಖಲು ಬಳಿಕ ಪೊಲೀಸರು ಮಡೆನೂರು ಮನುವನ್ನು 3ನೇ ಎಸಿಜೆಎಂ ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿರುವ ಕೋರ್ಟ್, ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಸಹನಟಿಯಾಗಿದ್ದ ಯುವತಿ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಮಾಡಿ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ದೂರು ನೀಡಿದ್ದರು. ಹೀಗಾಗಿ ಪೊಲೀಸರು ಕೇಸ್ ದಾಖಲಿಸಿಕೊಂಡು, ಮಡೆನೂರು ಮನುವನ್ನು ಬಂಧಿಸಿದ್ದರು. ಮಡೆನೂರು ಮನು ನಟನೆಯ ‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾ ಬಿಡುಗಡೆ ಸಂದರ್ಭದಲ್ಲಿಯೇ ಕಿರುತೆರೆ ನಟನಿಗೆ ಸಂಕಷ್ಟ ಎದುರಾಗಿದೆ.
ಪೊಲೀಸರ ವಶದಲ್ಲಿದ್ದ ಮನುವಿನ ವಿಚಾರಣೆ ನಡೆಸಿ ಮನು ಇದ್ದ ಮನೆ, ಸಂತ್ರಸ್ತೆ ಇದ್ದ ಮನೆ, ಕೆಲ ರೆಸಾರ್ಟ್ಗಳು ಇತ್ಯಾದಿಗಳ ಕಡೆ ಕರೆದೊಯ್ದು ಸ್ಥಳ ಮಹಜರನ್ನು ಪೊಲೀಸರು ಕಳೆದ ಎರಡು ದಿನಗಳಲ್ಲಿ ಮಾಡಿದ್ದರು. ತನಿಖೆ ಮುಗಿದ ಬಳಿಕ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಮೈಇದೀಗ ಮನುಗೆ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಹೀಗಾಗಿ ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿಗೆ ಹೋಗಲಿದ್ದಾರೆ.
