Trending

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ್ ಗೆ ಬಿಗ್ ಶಾಕ್ : ಗಡಿಪಾರು ನೋಟಿಸ್ ಜಾರಿ!

Spread the love

ಮಂಗಳೂರು(ದಕ್ಷಿಣ ಕನ್ನಡ): ಬಿಜೆಪಿ ಮುಖಂಡ ಅರುಣ್ ಪುತ್ತಿಲರನ್ನು ದ.ಕ.ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೋಟಿಸ್ ಜಾರಿಗೊಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋಮು ಸಂಘರ್ಷ ಹೆಚ್ಚಾಗುತ್ತಿದೆ. ತಿಂಗಳ ಅಂತರದಲ್ಲಿ ಮೂರು ಕೊಲೆ ನಡೆದಿದೆ. ಇದಾದ ಬಳಿಕ ಕೋಮು ಭಾವನೆ ಕೆರಳಿಸುವವರ ವಿರುದ್ಧ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅರುಣ್ ಪುತ್ತಿಲ ಅವರಿಗೆ ಕರ್ನಾಟಕ ಪೊಲೀಸ್ ಅಧಿನಿಯಮ, 1963 ಕಲಂ: 58 ರಡಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಜೂನ್ 6ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ. ಈ ವೇಳೆ ಅವರು ಸ್ವತಃ ಅಥವಾ ನ್ಯಾಯವಾದಿಯವರ ಮೂಲಕ ಹಾಜರಾಗಿ ವಾದಿಸಲು ಸೂಚನೆ ನೀಡಲಾಗಿದೆ. ತಪ್ಪಿದಲ್ಲಿ ಈ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೆಂದು ಭಾವಿಸಿ ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

[pj-news-ticker]