ಈ ಕಾಲ್ತುಳಿತಕ್ಕೆ ಕರ್ನಾಟಕ ಸರ್ಕಾರ ಮತ್ತು ಆರ್ಸಿಬಿ ಅಧಿಕಾರಿಗಳ ಭದ್ರತಾ ವ್ಯವಸ್ಥೆಗಳ ಬಗ್ಗೆ ಈಗ ಪ್ರಶ್ನೆಗಳು ಎದ್ದಿವೆ.
ಏತನ್ಮಧ್ಯೆ, ಈ ಬಗ್ಗೆ ಮಾತನಾಡಿರುವ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್, ಈ ಕಾರ್ಯಕ್ರಮದ ಬಗ್ಗೆ ತಮಗೆ ತಿಳಿದಿಲ್ಲ. ಇದರಲ್ಲಿ ಐಪಿಎಲ್ ಮತ್ತು ಬಿಸಿಸಿಐ ಯಾವುದೇ ಪಾತ್ರವಿಲ್ಲ. ಘಟನೆಯ ಬಗ್ಗೆ ತಿಳಿದ ತಕ್ಷಣ ನಾವು ಆರ್ಸಿಬಿ ಅಧಿಕಾರಿಗಳೊಂದಿಗೆ ಮಾತನಾಡಿದ್ದೇವೆ. ಇದು ಖಂಡಿತವಾಗಿಯೂ ತುಂಬಾ ದುಃಖಕರ ಮತ್ತು ದುರದೃಷ್ಟಕರ ಘಟನೆ. ಮೃತರಿಗೆ ತಮ್ಮ ಸಂತಾಪಗಳು.
ಈ ಕಾರ್ಯಕ್ರಮದ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ. ಕ್ರೀಡಾಂಗಣದೊಳಗೆ ಇದ್ದ ಜನರಿಗೆ ಸಹ ಈ ಕಾಲ್ತುಳಿತದ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಆರ್ಸಿಬಿ ಅಧಿಕಾರಿಗಳೊಂದಿಗೆ ಮಾತನಾಡಿದಾಗ, ಈ ಕಾಲ್ತುಳಿತದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಅವರು ಹೇಳಿದ್ದರು.
ಈ ಅವಘಡದ ಮಾಹಿತಿ ತಿಳಿದ ಕೂಡಲೇ ಕಾರ್ಯಕ್ರಮವನ್ನು ತಕ್ಷಣವೇ ಕೊನೆಗೊಳಿಸಲಾಗುವುದು ಎಂದು ಅವರು ಭರವಸೆ ನೀಡಿದರು ಎಂದು ಧುಮಾಲ್ ಹೇಳಿದ್ದಾರೆ.
