ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಈಗಾಗಲೇ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ ಅವರನ್ನು ಬಂಧಿಸಲಾಗಿದೆ. ಅವರು ಜೈಲುಪಾಲಾಗಿದ್ದಾರೆ. ಈ ಪ್ರಕರಣದಲ್ಲಿ ಅವರು ಹಾಗೂ ಅವರ ಪತ್ನಿಗೆ ಸೇರಿದಂತ 13.91 ಕೋಟಿ ಆಸ್ತಿಯನ್ನು ಜಾರಿ ನಿರ್ದೇಶನಾಲಯವು ಜಪ್ತಿ ಮಾಡಿದೆ.
ಈ ಕುರಿತಂತೆ ಎಕ್ಸ್ ನಲ್ಲಿ ಟ್ವಿಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಇಡಿಯು, ಶಿವಮೊಗ್ಗ ಜಿಲ್ಲಾ ಸಹಕಾರಿ ಬ್ಯಾಂಕಿನಿಂದ ಹಣವನ್ನು ವಂಚಿಸಿದ ಪ್ರಕರಣದಲ್ಲಿ, ಶಿವಮೊಗ್ಗ ಡಿಸಿಸಿ ಬ್ಯಾಂಕಿನ ಮಾಜಿ ಅಧ್ಯಕ್ಷ ಆರ್ ಎಂ ಮಂಜುನಾಥ ಗೌಡ ಮತ್ತು ಅವರ ಪತ್ನಿಗೆ ಸೇರಿದ ಪ್ರಸ್ತುತ ಮಾರುಕಟ್ಟೆ ಮೌಲ್ಯದ ರೂ. 13.91 ಕೋಟಿ ಮೌಲ್ಯದ ಸ್ಥಿರ ಮತ್ತು ಚರ ಆಸ್ತಿಗಳನ್ನು ಇಡಿ, ಬೆಂಗಳೂರು ವಲಯ ಕಚೇರಿಯು ಪಿಎಂಎಲ್‌ಎ, 2002 ರ ನಿಬಂಧನೆಗಳ ಅಡಿಯಲ್ಲಿ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ತಿಳಿಸಿದೆ.
