Trending

ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಶಾಕ್

Spread the love

ಬೆಂಗಳೂರು: ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಕರ್ನಾಟಕ ಹೈಕೋರ್ಟ್ ಶಾಕ್ ಕೊಟ್ಟಿದೆ. ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಕೋರ್ಟ್​ ನಿರಾಕರಿಸಿದೆ.

ಬೆಂಗಳೂರಿನಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬಂದ್ ಮಾಡುವಂತೆ ಈಗಾಗಲೇ ಕರ್ನಾಟಕ ಹೈಕೋರ್ಟ್​ ಆದೇಶ ಹೊರಡಿಸಿದೆ. ಇದನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮವಿಯನ್ನೂ ವಿಚಾರಣೆ ನಡೆಸಿದ ಹೈಕೋರ್ಟ್, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ನಿರಾಕರಿಸಿದೆ.

ಹೈಕೋರ್ಟ್‌ನ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಹಾಗೂ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ ಕುಮಾರ್‌ ಅವರಿದ್ದ ಪೀಠ, ಬೈಕ್ ಟ್ಯಾಕ್ಸಿ ಪರ ಮಧ್ಯಂತರ ಆದೇಶ ನೀಡಲು ನಿರಾಕರಿಸಿದ್ದು, ಮೇಲ್ಮನವಿ ಅರ್ಜಿಗಳನ್ನು ಜೂ.24ರಂದು ಅಂತಿಮವಾಗಿ ತೀರ್ಮಾನಿಸಲಾಗುವುದು ಎಂದಿದೆ. ಹೀಗಾಗಿ ಜೂನ್ 16ರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಇರುವುದಿಲ್ಲ.

ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದು, ಬೈಕ್ ಟ್ಯಾಕ್ಸಿಗಳ ಪರ್ಮಿಟ್ ನಿಯಮ ರೂಪಿಸಲು ಸರ್ಕಾರ ಸಿದ್ಧವಿಲ್ಲ. 8 ರಾಜ್ಯಗಳಲ್ಲಿ ಮಾತ್ರ ಬೈಕ್ ಟ್ಯಾಕ್ಸಿಗೆ ಪರ್ಮಿಟ್ ನೀಡಲಾಗಿದೆ. ಆದ್ರೆ, ಕರ್ನಾಟಕ ಸೇರಿ ಉಳಿದ ರಾಜ್ಯಗಳಲ್ಲಿ ಅನುಮತಿ ನೀಡಲಾಗಿಲ್ಲ. 4 ವರ್ಷಗಳಿಂದ ಮಧ್ಯಂತರ ಆದೇಶದ ಮೇಲೆ ಬೈಕ್ ಟ್ಯಾಕ್ಸಿ ನಡೆಯುತ್ತಿದೆ. ಸುಪ್ರೀಂಕೋರ್ಟ್ ಕೂಡಾ ಮಧ್ಯಂತರ ಆದೇಶ ನಿರಾಕರಿಸಿದೆ ಎಂದು ಕೋರ್ಟ್​ ಹೇಳಿದೆ.

ಮೋಟಾರು ವಾಹನ ಕಾಯ್ದೆಯ ನಿಯಮಗಳ ಪ್ರಕಾರವಾಗಿ ಹಳದಿ ನೋಂದಣಿ ಫಲಕ (ಯೆಲ್ಲೋ ಬೋರ್ಡ್) ಹೊಂದಿರುವ ಸಾರಿಗೆ ವಾಹನಗಳಂತೆ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಬೇಕು ಎಂಬುದಾಗಿ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ರೊಪ್ಪೆನ್ ಟ್ರಾನ್ಸ್​​ಪೋರ್ಟೇಶನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಮತ್ತು ಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದವು.

ಈ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಬೈಕ್ ಸೇವೆಯನ್ನು ಸ್ಥಗಿತಗೊಳಿಸಲು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಅಗ್ರಿಗ್ರೇಟರ್ ಸಂಸ್ಥೆಗಳು ಹೈಕೋರ್ಟ್​​ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

[pj-news-ticker]