Trending

ಹಾಸನದಲ್ಲಿ ಮುಂದುವರೆದ ಹೃದಯಾಘಾತ ಸರಣಿ ಸಾವು: ಮತ್ತೋರ್ವ ಬಲಿ

Spread the love

ಹಾಸನ: ಜಿಲ್ಲೆಯಲ್ಲಿ ಹೃದಯಾಘಾತದ  ಸರಣಿ ಮುಂದುವರಿದಿದೆ. ಇಂದು ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಲ್ಲಿಗೆ ಜಿಲ್ಲೆಯಲ್ಲಿ 1 ತಿಂಗಳ ಅಂತರದಲ್ಲಿ 16 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಸಿದ್ದೇಶ್ವರ್ ನಗರದ ನಿವಾಸಿ ಗೋವಿಂದ(37) ಮೃತ ವ್ಯಕ್ತಿ. ಆಟೋ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರೇ ಆಟೋ ಚಲಾಯಿಸಿಕೊಂಡು ಜಿಲ್ಲಾಸ್ಪತ್ರೆಗೆ ತೆರಳಿದ್ದಾರೆ. ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಊಹಿಸೋಕೂ ಆಗ್ತಿಲ್ಲ, ಅರಗಿಸಿಕೊಳ್ಳೂಕೂ ಆಗುತ್ತಿಲ್ಲ. ಬಾಳಿ ಬದುಕ ಬೇಕಾದವರೇ ಅರ್ಧಕ್ಕೇ ಜೀವನದ ಆಟ ಮುಗಿಸುತ್ತಿದ್ದಾರೆ. ಅದರಲ್ಲೂ ಜಿಲ್ಲೆಯಲ್ಲಿ ಹೃದಯಾಘಾತ ಇನ್ನಿಲ್ಲದಂತೆ ಕಾಡುತ್ತಿದೆ. ಚಿಕ್ಕವರಿಂದ ಹಿಡಿದು ದೊಡ್ಡವರವರೆಗೆ ಯಾರನ್ನೂ ಬಿಡುತ್ತಿಲ್ಲ. ಜಿಲ್ಲೆಯಲ್ಲಿ 1 ತಿಂಗಳ ಅಂತರದಲ್ಲಿ 16 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

[pj-news-ticker]