ಶಿವಮೊಗ್ಗ: ಕರ್ನಾಟಕದಲ್ಲಿ ಜಾನುವಾರುಗಳ ಮೇಲಿನ ಕ್ರೌರ್ಯ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಹಲವೆಡೆ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ವಿಕೃತಿ ಮೆರೆಯುತ್ತಿದ್ದಾರೆ. ಗೋವಿನ ಮೇಲಿನ ದಾಳಿ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ.
ಹೀಗಿದ್ದರು ಇದೀಗ ಮತ್ತೊಂದು ಹಸುವಿನ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದಿರುವಂತಹ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ವಿಜಾಪುರದಲ್ಲಿ ನಡೆದಿದೆ. ಈ ಕುರಿತಾಗಿ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿಡಿಗೇಡಿಗಳು ಗ್ರಾಮದ ವಿಜಯಕುಮಾರ್ ಎಂಬುವರಿಗೆ ಸೇರಿದ ಹಸುವಿನ ಕೆಚ್ಚಲು ಕೊಯ್ದಿದ್ದಾರೆ. ಶನಿವಾರ ಹಸು ಮೇಯಲು ಹೋಗಿದ್ದಾಗ ಕೃತ್ಯವೆಸಗಿ ವಿಕೃತಿ ಮೆರೆದಿದ್ದಾರೆ. ಸ್ಥಳೀಯರ ಸಹಾಯದಿಂದ ಹಸುವನ್ನು ಮನೆಗೆ ಕರೆತಂದ ವಿಜಯಕುಮಾರ್, ಹಸುವಿಗೆ ಚಿಕಿತ್ಸೆ ಕೊಡಿಸಿದ್ದಾರೆ.
