Trending

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಲೇಖಕಿ ಬಾನು ಮುಷ್ತಾಕ್‌ ಆಯ್ಕೆ

Spread the love

ಬಳ್ಳಾರಿ: ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರು ಆಯ್ಕೆಯಾಗಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಕಸಾಪದ ರಾಜ್ಯಾಧ್ಯಕ್ಷ ಮಹೇಶ ಜೋಶಿ ಅವರು ಮಾತನಾಡಿದರು.

ಬಳ್ಳಾರಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬೂಕ‌ರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಇದೇ ವೇಳೆ ಬೂಕ‌ರ್ ಪ್ರಶಸ್ತಿ ಪುರಸ್ಕೃತ ಲೇಖಕಿ, ಅನುವಾದಕಿ ದೀಪ ಭಾಸ್ತಿ ಅವರನ್ನು ಸಮ್ಮೇಳನದಲ್ಲಿ ಗೌರವಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.‌

ಇತ್ತೀಚೆಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್‌ ಪುರಸ್ಕಾರ 2025ಕ್ಕೆ ಕನ್ನಡದ ಕತೆಗಾರ್ತಿ, ಸಾಹಿತಿ ಬಾನು ಮುಷ್ತಾಕ್‌ ಅವರು ಭಾಜನರಾಗಿದ್ದರು. ಬಾನು ಮುಷ್ತಾಕ್‌ ಅವರ ʼಹಸೀನಾ ಮತ್ತು ಇತರ ಕತೆಗಳುʼ ಸಣ್ಣಕತೆಗಳ ಸಂಕಲನದ ಇಂಗ್ಲಿಷ್‌ ಅನುವಾದ ʼಹಾರ್ಟ್‌ ಲ್ಯಾಂಪ್‌ʼಗೆ ಬೂಕರ್‌ ಪ್ರಶಸ್ತಿ ದೊರೆತಿತ್ತು.

 

[pj-news-ticker]