ಆನಂದಪುರ: ಕಡೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಕೋಳಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮುಂಬಾಳ್ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಪಲ್ಟಿಯಾಗಿ ಸಾವಿರಾರು ಕೋಳಿಗಳು ಸಾವನ್ನಪ್ಪಿದ ಘಟನೆ ಜು.2ರ ಬುಧವಾರ ಬೆಳಗ್ಗೆ ನಡೆದಿದೆ.
ಕಡೂರುನಿಂದ ಫಾರಂ ಕೋಳಿ ತುಂಬಿದ ಲಾರಿ ಸಾಗರಕ್ಕೆ ತೆರಳುತ್ತಿದ್ದ ಸಂದರ್ಭ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳ್ ಕೆರೆ ಏರಿಯ ಮೇಲೆ ಎದುರಿನಿಂದ ಬರುತ್ತಿದ್ದ ಬಸ್ಸನ್ನು ತಪ್ಪಿಸಲು ಹೋಗಿ ಲಾರಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.
ಈ ಪರಿಣಾಮ ಲಾರಿ ಪಲ್ಟಿಯಾಗಿ ಸಾವಿರಾರು ಕೋಳಿಗಳು ಸಾವನ್ನಪ್ಪಿದ್ದು, ಕೋಳಿಗಳನ್ನು ಕೊಂಡೊಯ್ಯಲು ಸ್ಥಳೀಯರು ಮುಗಿಬಿದ್ದಿದ್ದರು.
ಸತ್ತ ಕೋಳಿಯಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದೆ ಎನ್ನಲಾಗಿದೆ.
