ಮೈಸೂರು: ಯುವಕನಿಂದ ಚಾಕು ಇರಿತಕ್ಕೊಳಗಾಗಿದ್ದ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮೃತಪಟ್ಟಿದ್ದಾಳೆ.
ಪಾಂಡವಪುರದ ಎಲೆಕೆರೆ ಹ್ಯಾಂಡ್ ಪೋಸ್ಟ್ ಮೂಲದ ಪೂರ್ಣಿಮಾ (36) ಮೃತ ಶಿಕ್ಷಕಿ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಗ್ರಾಮದ ಅಭಿಷೇಕ್ ಚಾಕು ಇರಿದ ಆರೋಪಿ.
ಮೈಸೂರಿನಲ್ಲಿ ಶಿಕ್ಷಕಿಯಾಗಿರುವ ಪೂರ್ಣಿಮಾ ಹಿಂದೆ ಬಿದ್ದಿದ್ದ ಅಭಿಷೇಕ್, ಪ್ರೀತಿಸುವಂತೆ ಪೀಡಿಸುತ್ತಿದ್ದ. ಈ ವಿಚಾರವಾಗಿ ಶನಿವಾರ ಮಾತುಕತೆಗೆ ಬಂದಿದ್ದ, ಆದರೆ ಪೂರ್ಣಿಮಾ ಪ್ರೀತಿ ನಿರಾಕರಣೆ ಮಾಡಿದ್ದರಿಂದ ಕೋಪಗೊಂಡು ಚಾಕುವಿನಿಂದ ಮನಸೋ ಇಚ್ಛೆ ಇರಿದು, ಬಳಿಕ ತಾನೇ ಆಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದ. ಪೂರ್ಣಿಮಾ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಭಿಷೇಕ್ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
