Trending

ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅರವಿಂದ ಲಿಂಬಾವಳಿ

Spread the love

ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕುತೂಹಲದ ನಡುವೆ ಭಿನ್ನರ ಚಟುವಟಿಕೆ ಹೆಚ್ಚಾಗಿದೆ. ಇದರ ನಡುವೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಬಿಎಸ್‌ ಯಡಿಯೂರಪ್ಪ ವಿರುದ್ದ ಹರಿಹಾಯ್ದಿದ್ದಾರೆ.

ದಾವಣಗೆರೆಯಲ್ಲಿ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಜನ್ಮದಿನ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದ ಅವರು, ಯಡಿಯೂರಪ್ಪ ಪಕ್ಷ ಬಿಟ್ಟು ಹೋಗಿದ್ದರು.ಅವರು ಮತ್ತೆ ಯಾಕೆ ಬಂದರೋ ಗೊತ್ತಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಮನೆ ಬಾಗಿಲು ಬಡಿದಿದ್ದರು. ಇದನ್ನು ತಡೆದಿದ್ದು, ಮತ್ತೆ ಮುಖ್ಯಮಂತ್ರಿ ಮಾಡಿದ್ದು ಸಿದ್ದೇಶ್ವರ ಅವರು ಎಂದರು.

ಯಡಿಯೂರಪ್ಪ ಅವರು ಶಿಕಾರಿಪುರದಲ್ಲಿ ಗೆಲ್ಲಲು ಕೂಡ ಜಿ.ಎಂ.ಸಿದ್ದೇಶ್ವರ ಕಾರಣ. ಅಲ್ಲಿದ್ದ ಅಸಮಾಧಾನ, ಸಮಸ್ಯೆ ಸ್ವತಃ ಸರಿಪಡಿಸಿದ್ದಾರೆ. ಅನಂತಕುಮಾರ್ ಅವರೊಂದಿಗೆ ಸಮಸ್ಯೆ ಎದುರಾದಾಗ ನಾವು ಸಂಪರ್ಕ ಮಾಡುತ್ತಿದ್ದದ್ದು ಸಿದ್ದೇಶ್ವರ ಅವರನ್ನೇ. ಅವರ ಮೂಲಕ ಮಾತನಾಡಿಸಿ ರಾಜ್ಯ ಮಟ್ಟದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿದ್ದೇವೆ. ಆದರೆ ಹೆಗಲಿಗೆ ಹೆಗಲು ಕೊಟ್ಟು ಜತೆಗೆ ನಿಂತ ಸ್ನೇಹಿತನನ್ನು ಯಡಿಯೂರಪ್ಪ ನಡೆಸಿಕೊಳ್ಳುತ್ತಿರುವ ರೀತಿ ಬಗ್ಗೆ ಬೇಸರವಿದೆ. ಅವರ ಕುಟುಂಬಕ್ಕೆ ಆಗಿರುವ ಅನ್ಯಾಯ ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.

[pj-news-ticker]