Trending

ಸಿಗಂದೂರು ಸೇತುವೆಗೆ ”ಚೌಡೇಶ್ವರಿ ದೇವಿ” ಹೆಸರು ನಾಮಕರಣ : ನಿತಿನ್​ ಗಡ್ಕರಿ

Spread the love

ಶಿವಮೊಗ್ಗ: ಶಿವಮೊಗ್ಗ  ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ನಿರ್ಮಾಣ ಮಾಡಲಾಗಿರುವ ಸೇತುವೆಯನ್ನು ಕೇಂದ್ರ ಸಚಿವ ನಿತಿನ್​ ಗಡ್ಕರಿ ಅವರು ಸೋಮವಾರ ಲೋಕಾರ್ಪಣೆಗೊಳಿಸಿದರು.

ಬಳಿಕ, ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವ ನಿತಿನ್​ ಗಡ್ಕರಿ, ಸೇತುವೆಗೆ ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ಎಂದು ನಾಮಕರಣ ಮಾಡಲಾಗಿದೆ ಎಂದು ಘೋಷಿಸಿದರು.

ಸಾಗರ ಪಟ್ಟಣದ ನೆಹರು ಮೈದಾನದಲ್ಲಿ ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ದೇಶಿಸಿ ಸಚಿವ ನಿತಿನ್​ ಗಡ್ಕರಿ ಮಾತನಾಡಿದರು. ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ನಿರ್ಮಾಣಕ್ಕೆ ನಾನೇ ಭೂಮಿಪೂಜೆ ಮಾಡಿದ್ದೆ. ಇದೀಗ, ನಾನೇ ಉದ್ಘಾಟನೆ ಮಾಡಿದ್ದು ನನ್ನ ಸೌಭಾಗ್ಯ ಎಂದು ಹೇಳಿದರು.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನೂತನ ಹೆದ್ದಾರಿ ನಿರ್ಮಾಣ ಮಾಡಿದ್ದೇವೆ. ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಶಿವಮೊಗ್ಗ-ತುಮಕೂರು ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಹುಬ್ಬಳ್ಳಿ-ಧಾರವಾಡ ಹೆದ್ದಾರಿ ಕಾಮಗಾರಿ ಶೀಘ್ರದಲ್ಲೇ ಪೂರ್ಣ ಆಗಲಿದೆ ಎಂದು ತಿಳಿಸಿದರು.

5000 ಕೋಟಿ ರೂ. ವೆಚ್ಚದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಗುರಿ ಹೊಂದಿದ್ದೇವೆ. 1300 ಸಾವಿರ ಕೋಟಿ ರೂ. ವೆಚ್ಚದಲ್ಲಿ ಹಾಸನದಿಂದ ರಾಯಚೂರಿಗೆ ಸಂಪರ್ಕ ಕಲ್ಪಿಸುವ ನಾಲ್ಕು ಲೈನ್​ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಇದರಿಂದ ಪ್ರಯಾಣದ ಸಮಯ ಅರ್ಧದಷ್ಟು ಕಡಿಮೆಯಾಗಲಿದೆ. ಬೆಂಗಳೂರು-ಚೆನೈ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ ಎಂದರು.

ಬೆಂಗಳೂರಿನಲ್ಲಿ ಟ್ರಾಫಿಕ್​ ಸಮಸ್ಯೆ ನಿವಾರಣೆಗೆ 15 ಸಾವಿರ ಕೋಟಿ ರೂ. ವೆಚ್ಚದಲ್ಲಿ ರಿಂಗ್ ರೋಡ್ ಕಾಮಗಾರಿ ನಡೆಯುತ್ತಿದೆ. ಶೇ 40 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಶೀಘ್ರದಲ್ಲೇ ಉಳಿದ ಕಾಮಗಾರಿಯೂ ಪೂರ್ಣಗೊಳ್ಳಲಿದೆ ಎಂದರು.

ಶಿವಮೊಗ್ಗ-ತುಮಕೂರು ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪ್ರಯಾಣಿಸಲು ಸದ್ಯ 40 ನಿಮಿಷ ಸಮಯ ಬೇಕಾಗುತ್ತದೆ. ಹೆದ್ದಾರಿ ಕಾಮಗಾರಿ ಪೂರ್ಣಗೊಂಡ ಬಳಿಕ ಕೇವಲ 20 ನಿಮಿಷದಲ್ಲಿ ಹುಬ್ಬಳ್ಳಿಯಿಂದ ಧಾರವಾಡಕ್ಕೆ ತಲುಪಬಹುದು. ಶೀಘ್ರದಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

[pj-news-ticker]