Trending

ಸರ್ಕಾರದ ಕಾರ್ಯಕ್ರಮದಿಂದ ಅರ್ಧಕ್ಕೇ ನಿರ್ಗಮಿಸಿ ದಿಢೀರ್ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್ : ಕುತೂಹಲ ಮೂಡಿಸಿದ ನಡೆ

Spread the love

ಬೆಂಗಳೂರು: ಮೈಸೂರಿನಲ್ಲಿ ನಡೆದ ಸರ್ಕಾರದ ಸಾಧನಾ ಸಮಾವೇಶ ಕಾರ್ಯಕ್ರಮದಿಂದ ಅರ್ಧಕ್ಕೇ ನಿರ್ಗಮಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಪ್ರಯಾಣ ಎಂಬ ಮಾಹಿತಿ ಲಭ್ಯವಾಗಿದ್ದರೂ, ಮೈಸೂರಿನಲ್ಲಿ ನಡೆದ ಸರ್ಕಾರದ ಕಾರ್ಯಕ್ರಮದಿಂದ ಅರ್ಧಕ್ಕೆ ನಿರ್ಗಮಿಸಿ ತರಾತುರಿಯಲ್ಲಿ ದೆಹಲಿಗೆ ಹೊರಟಿದ್ದು ಕುತೂಹಲ ಮೂಡಿಸಿದೆ.

ಕಳೆದ ಕೆಲವು ದಿನಗಳ ಹಿಂದಷ್ಟೇ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದರು. ಈಗ ಮತ್ತೆ ತರಾತುರಿಯಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಜುಲೈ 11 ಹಾಗೂ 12ರಂದು ಶಿರಡಿಗೆ ತೆರಳಿದ್ದ ಡಿಕೆಶಿ ದಿಢೀರ್ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದರು. ಇದಾದ 8 ದಿನಗಳ ಅಂತರದಲ್ಲೇ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ.

[pj-news-ticker]