ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳ ಕೆಲವು ಕಡೆ ಅತೀ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಜುಲೈ 20 ರಿಂದ 24ರ ವರೆಗೆ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಮಂಡ್ಯ, ಮೈಸೂರು, ಚಾಮರಾಜನಗರ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಗತಳಿವೆ.
ಈ ಜಿಲ್ಲೆಗಳಿಗೆ ಸೋಮವಾರ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಜುಲೈ 24ರ ವರೆಗೆ ಹಗುರದಿಂದ ಸಾಧಾರಣವಾಗಿ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಪೂರ್ವ ಅರಬ್ಬಿ ಸಮುದ್ರದ ಮಹಾಷ್ಟ್ರ, ಕರ್ನಾಟಕ ಹಾಗೂ ಕೇರಳದ ಕರಾವಳಿ ತೀರದಲ್ಲಿ ಟ್ರಫ್ ಇದೆ. ಸಿಯರ್ಝೋನ್ ಪೂರ್ವ-ಪಶ್ಚಿಮವಾಗಿ 17 ಡಿಗ್ರಿ ಉತ್ತರ ಅಕ್ಷಾಂಶದಲ್ಲಿದ್ದು, ಅದು 5.8 ಕಿ.ಮೀ ಎತ್ತರದಲ್ಲಿ ಇದೆ. ಇದರ ಪ್ರಭಾವದಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಜುಲೈ 24ರ ವರೆಗೆ ವ್ಯಾಪಕವಾಗಿ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಜುಲೈ 24ರ ವರೆಗೆ ಹಲವು ಕಡೆ ಮಳೆಯಾಗಲಿದೆ ಎಂದು ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.
