ಭದ್ರಾವತಿ : ಪಿ ಎಲ್ ಡಿ ಬ್ಯಾಂಕಿನ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡರು ಆದ ಬಿ.ಕೆ. ಶಿವಕುಮಾರ್ ತಮ್ಮ ಇಲ್ಲಿನ ಸಿದ್ಧಾರ್ಥ ಅಂಧರ ಕೇಂದ್ರದ ಆವರಣದಲ್ಲಿ ಸಸಿಗಳನ್ನು ನೆಟ್ಟು ಅಲ್ಲಿನ ಅಂಧ ವಿದ್ಯಾರ್ಥಿಗಳ ಜೊತೆಗೆ ತಮ್ಮ ಹುಟ್ಟು ಹುಟ್ಟುಹಬ್ಬ ಆಚರಿಸಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ದೃಷ್ಟಿ ಇಲ್ಲದಿದ್ದರೂ ಕೂಡ ಇಲ್ಲಿನ ವಿದ್ಯಾರ್ಥಿಗಳು ವಿದ್ಯಾಭ್ಯಾಸದೊಂದಿಗೆ ಕಂಪ್ಯೂಟರ್ ಶಿಕ್ಷಣ, ಕೌಶಲ್ಯಾಭಿವೃದ್ಧಿ ತರಬೇತಿ ಪಡೆದುಕೊಂಡು ಸ್ವಾಭಿಮಾನ ಹಾಗೂ ಸ್ವಾವಲಂಬನೆಯ ಜೀವನ ನಡೆಸುತ್ತಿರುವ ಇವರ ಸಾಧನೆ ಮೆಚತಕ್ಕದ್ದು ಎಂದು ಪ್ರಶಂಶಿಸಿದರು.
ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಸರ್ಕಾರ ಪ್ರತಿ ವರ್ಷ ಏರ್ಪಡಿಸುವ ಜಿಲ್ಲಾಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಕಳೆದ 18-20 ವರ್ಷಗಳಿಂದ ಸಮಗ್ರ ಪ್ರಶಸ್ತಿಯನ್ನು ಪಡೆಯುವುದರೊಂದಿಗೆ ರಾಜ್ಯಮಟ್ಟದ ಪ್ಯಾರಾ ಒಲಂಪಿಕ್ಸ್ ಅಥ್ಲೆಟಿಕ್ಸ್ ಮತ್ತು ಅಂಧರ ಕ್ರಿಕೆಟ್ ನಲ್ಲಿ ರಾಜ್ಯಮಟ್ಟದ ಸಾಧನೆ ಮಾಡಿರುವುದು ನಮ್ಮ ಇಡೀ ಶಿವಮೊಗ್ಗ ಜಿಲ್ಲೆ ಹೆಮ್ಮೆ ಪಡುವಂತ ವಿಷಯವಾಗಿದೆ ಎಂದರು.
ಸಿದ್ದಾರ್ಥ್ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭದಲ್ಲಿ ಮೆಸ್ಕಾಂ ನ ಸಲಹಾ ಸಮಿತಿಯ ಅಧ್ಯಕ್ಷ ಬಸವಂತಪ್ಪ, ಡಿಸಿಸಿ ಬ್ಯಾಂಕಿನ ನಿರ್ದೇಶಕ ದಶರಥ್ ಗಿರಿ, ಕುವೆಂಪು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಶಿವಕುಮಾರ್,ಪಿಎಲ್ಡಿ ಬ್ಯಾಂಕಿನ ನಿರ್ದೇಶಕ ಬೊಮ್ಮೇನಹಳ್ಳಿ ಶ್ರೀನಿವಾಸ್, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಕಾಚ್ಕೊಂಡನಹಳ್ಳಿ ನಾಗರಾಜ್, ಡಿಎಸ್ಎಸ್ ಮುಖಂಡ ಶ್ರೀ ಮುತ್ತು ,ಕಾರ್ತಿಕ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
