ಶಿವಮೊಗ್ಗ: ಗಂಭೀರ ಅಸ್ವಸ್ಥೆಯಾಗಿದ್ದ ಯುವತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಮುಂಬೈಗೆ ಏರ್‌ಲಿಫ್ಟ್ ಮಾಡಲಾಯಿತು. ಶಿವಮೊಗ್ಗ ಪೊಲೀಸರು ಏರ್‌ಪೋರ್ಟ್ ವರೆಗೂ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದರು.
ಶಿವಮೊಗ್ಗದ ಗಾಂಧಿ ಬಜಾರ್‌ನ ತಿಮ್ಮಪ್ಪನ ಕೊಪ್ಪಲು ಗ್ರಾಮದ ನಿವಾಸಿಯಾಗಿರುವ ಮಾನ್ಯ (22) ಕಳೆದ ಕೆಲವು ದಿನಗಳಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.
ಆದರೆ ಇವರ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಮುಂಬೈಗೆ ರವಾನಿಸಲು ನಿರ್ಧರಿಸಲಾಯಿತು.
ಶಿವಮೊಗ್ಗದ ಖಾಸಗಿ ಆಸ್ಪತ್ರೆಯಿಂದ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ವಿಶೇಷ ವಿಮಾನದ ಮೂಲಕ ಕಳುಹಿಸಿ ಕೊಡಲಾಯಿತು.
