Trending

ಮಹೇಶ ಜೋಶಿ ವಿರುದ್ಧ ದೂರು : ತನಿಖೆಗೆ ಅಧಿಕಾರಿಗಳ ಸಮಿತಿ ರಚನೆ

Spread the love

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್‌ ಜೋಶಿ ವಿರುದ್ಧ ಸ್ವೀಕೃತವಾಗಿರುವ ಎಲ್ಲ ದೂರುಗಳಿಗೆ ಸಂಬಂಧಿಸಿ ಸಮಗ್ರವಾಗಿ ಹಾಗೂ ನಿಷ್ಪಕ್ಷವಾಗಿ ತನಿಖೆ ನಡೆಸಲು ಅಧಿಕಾರಿಗಳ ಸಮಿತಿಯನ್ನು ರಚಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ (ಆಡಳಿತ ಕನ್ನಡ) ಸರಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. 30 ದಿನಗಳಲ್ಲಿ ತನಿಖಾ ವರದಿಯನ್ನು ನೀಡುವಂತೆ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಸಹಕಾರ ಸಂಘಗಳ ನಿಬಂಧಕರು (ಬೆಂಗಳೂರು), ಜಂಟಿ ನಿರ್ದೇಶಕರು, ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಶಾಖೆ (ಬೆಂಗಳೂರು), ಜಂಟಿ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ (ಬೆಂಗಳೂರು), ಜಂಟಿ ನಿರ್ದೇಶಕರು, ಕೇಂದ್ರ ಕಚೇರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ (ಬೆಂಗಳೂರು), ಲೆಕ್ಕಪತ್ರಾಧಿಕಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ( ಬೆಂಗಳೂರು), ಪತ್ರಾಂಕಿತ ವ್ಯವಸ್ಥಾಪಕರು , ಕನ್ನಡ ಮತ್ತು ಸಂಸ್ಕೃತಿ ಇಲಾಖೆ(ಬೆಂಗಳೂರು)ಯ ಅಧಿಕಾರಿಗಳನ್ನು ತನಿಖೆಗಾಗಿ ನೇಮಕ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅನೇಕ ಹಣಕಾಸಿನ ವ್ಯವಹಾರ ನಡೆದಿರುವ ಬಗ್ಗೆ ದೂರು ಬಂದಿದ್ದು ಜತೆಗೆ ಪರಿಷತ್ತಿನ ಸದಸ್ಯರಿಗೆ ವಿನಾಕಾರಣ ನೋಟೀಸ್‌ ನೀಡಿ ಕಿರುಕುಳ ನೀಡಲಾಗುತ್ತಿದೆ ಎಂಬ ದೂರು ಕೂಡ ಬಂದಿದೆ. ಈ ಎಲ್ಲ ಸ್ವೀಕೃತ ದೂರುಗಳಿಗೆ ಸಂಬಂಧಿಸಿ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.

[pj-news-ticker]