ಆನಂದಪುರ: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಇಬ್ಬರನ್ನು ಬಂಧಿಸಿದ ಘಟನೆ ಬುಧವಾರ ಸ್ಥಳೀಯ ಬಸ್ ನಿಲ್ದಾಣದಲ್ಲಿ ನಡೆದಿದೆ.
ಪ್ರವೀಣ್, ಜಗದೀಶ್ ಬಂಧಿತರು.
ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್, ದ್ವಿಚಕ್ರ ವಾಹನವನ್ನು ಓವರ್ ಟೇಕ್ ಮಾಡಿ ಬಂದ ಕಾರಣ ಮದ್ಯಪಾನ ಮಾಡಿದ ಇಬ್ಬರು, ಕರ್ತವ್ಯದಲ್ಲಿದ್ದ ಚಾಲಕ ಮೋಹನ್ ಅವರಿಗೆ ಆನಂದಪುರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸುತ್ತಿದ್ದ ಸಂದರ್ಭ ಆತನ ಮೇಲೆ ಹಲ್ಲೆ ಮಾಡಿದ್ದಾರೆ.
ಈ ಪರಿಣಾಮ ಚಾಲಕ ಮೋಹನ್ ಅವರ ಕೈಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಚಾಲಕನ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಿನ್ನೆಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
