Trending

ಚಾರ್ಮಾಡಿ ಘಾಟಿಯಲ್ಲಿ ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KSRTC ಬಸ್–ಕಾರು ಮುಖಾಮುಖಿ ಡಿಕ್ಕಿ : ನಾಲ್ವರಿಗೆ ಗಂಭೀರ ಗಾಯ

Spread the love

ಕೊಟ್ಟಿಗೆಹಾರ: ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ಕಾರಿನ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಬಳಿ ರವಿವಾರ ನಡೆದಿದೆ.

ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಚಿಕ್ಕನಾಯಕನ ಹಳ್ಳಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು, ಘಾಟಿಯ ತಿರುವಿನಲ್ಲಿ ಪರಸ್ಪರ ಡಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ ಕಾರು ಸಂಪೂರ್ಣ ಹಾನಿಗೊಳಗಾಗಿದೆ. ಗಾಯಗೊಂಡ ನಾಲ್ವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

[pj-news-ticker]