Trending

ನಟ ದರ್ಶನ್ ಬಂಧನ : ಮತ್ತೆ ಜೈಲು ವಾಸ

Spread the love

ಇಷ್ಟು ದಿನಗಳ ಕಾಲ ಸಿನಿಮಾ ಕೆಲಸ ಹಾಗೂ ಫ್ಯಾಮಿಲಿ ಜೊತೆಯಲ್ಲಿ ಬ್ಯುಸಿ ಆಗಿದ್ದ ದರ್ಶನ್ ಅವರಿಗೆ ಇನ್ಮುಂದೆ ಜೈಲೇ ಗತಿಯಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಬಂದಾಗ ದರ್ಶನ್ ಬೆಂಗಳೂರಿನಲ್ಲಿ ಇರಲಿಲ್ಲ. ಸತ್ಯಮಂಗಲದ ಅಂದೂರು ಬಳಿ ಜಾತ್ರೆಯಲ್ಲಿ ಭಾಗಿಯಾಗಿ ಫಾರ್ಮ್‌ಹೌಸ್‌ಗೆ ಕುದುರೆ ಖರೀದಿಸಲು ಅವರು ತೆರಳಿದ್ದರು. ಜಾತ್ರೆಯಲ್ಲಿ ಎರಡು ಕುದುರೆಗಳನ್ನು ಫೈನಲ್‌ ಮಾಡಿದ್ದರು. ಜಾತ್ರೆಯಲ್ಲಿರುವಾಗಲೇ ಸ್ನೇಹಿತ ಧನ್ವೀರ್ ದೂರವಾಣಿ ಕರೆ ಮಾಡಿ ಸುಪ್ರೀಂಕೋರ್ಟ್‌ನ ತೀರ್ಪಿನ ಬಗ್ಗೆ ಮಾಹಿತಿ ನೀಡಿದ್ದರು. ಬಳಿಕ ದರ್ಶನ್ ಅವರು ಬೆಂಗಳೂರಿಗೆ ಆಗಮಿಸಿದರು.

ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿರುವ ಅಪಾರ್ಟ್​ಮೆಂಟ್​ಗೆ ದರ್ಶನ್ ಬಂದರು. ಪತ್ನಿ ವಿಜಯಲಕ್ಷ್ಮೀಯ ಫ್ಲ್ಯಾಟ್​ನಲ್ಲಿ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಗೆ ಈಗ ಮತ್ತೆ ಸಂಕಷ್ಟದ ದಿನಗಳು ಆರಂಭ ಆಗಿವೆ. ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಎಂಬ ಹಾಡನ್ನು ಬಿಡುಗಡೆ ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದ ದರ್ಶನ್ ಅವರಿಗೆ ಕೋರ್ಟ್​ ತೀರ್ಪಿನಿಂದ ನೆಮ್ಮದಿ ಕಳೆದುಹೋಗುವಂತಾಗಿದೆ.

ಹೊಸಕೆರೆಹಳ್ಳಿಯಲ್ಲಿರುವ ಪ್ರೆಸ್ಟೀಜ್ ಸೌತ್ ರಿಡ್ಜ್ ಅಪಾರ್ಟ್​ಮೆಂಟ್​​ನ 15ನೇ ಮಹಡಿಯಲ್ಲಿರುವ ವಿಜಯಲಕ್ಷ್ಮೀ ಫ್ಲ್ಯಾಟ್​ ನಂ.4154ರಲ್ಲಿ ಬಂಧನ ಆಗಿದೆ. ಇನ್ನೋವಾ ಕಾರಿನಲ್ಲಿ ಬಂದ ದರ್ಶನ್ ಅವರು ವಿಜಯಲಕ್ಷ್ಮೀ ಫ್ಲ್ಯಾಟ್​ಗೆ ಹಿಂಬದಿ ಗೇಟ್​ನಿಂದ ಆಗಮಿಸಿದ್ದರು. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ನಾಗೇಶ್‌, ಗೋವಿಂದರಾಜನಗರ ಠಾಣೆ ಇನ್ಸ್‌ಪೆಕ್ಟರ್‌ ಸುಬ್ರಹ್ಮಣ್ಯ ನೇತೃತ್ವದಲ್ಲಿ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ.

[pj-news-ticker]