Trending

ಸ್ಯಾಂಡಲ್‌ವುಡ್‌ ನಟ ಅಜಯ್‌ ರಾವ್‌ ದಾಂಪತ್ಯದಲ್ಲಿ ಬಿರುಕು : ಡಿವೋರ್ಸ್‌ಗೆ ಅರ್ಜಿ

Spread the love

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ಜೋಡಿಯ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ. ಕನ್ನಡ ಚಿತ್ರರಂಗದ ಜನಪ್ರಿಯ ನಟ ಅಜಯ್ ರಾವ್ ಮತ್ತು ಅವರ ಪತ್ನಿ ಸ್ವಪ್ನಾ ವಿಚ್ಛೇದನಕ್ಕೆ ಮುಂದಾಗಿದ್ದಾರೆ.

ಆ ಮೂಲಕ ಇವರಿಬ್ಬರ 11 ವರ್ಷಗಳ ದಾಂಪತ್ಯ ಜೀವನ ಮುರಿದು ಬಿದ್ದಿದೆ. ಇವರಿಬ್ಬರು 2014ರಲ್ಲಿ ಹೊಸೇಪಟೆಯಲ್ಲಿ ಸರಳವಾಗಿ ವಿವಾಹವಾಗಿದ್ದರು. ದಂಪತಿಗೆ ಚರಿಷ್ಮಾ ಹೆಸರಿನ ಮಗಳಿದ್ದಾಳೆ. ವಿಚ್ಛೇದನಕ್ಕೆ ನಿಖರ ಕಾರಣಗಳು ತಿಳಿದು ಬಂದಿಲ್ಲ.

ಅಜಯ್ ರಾವ್ ವಿರುದ್ಧ ಸಪ್ನಾ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ಸಹ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಕಳೆದ ವರ್ಷವಷ್ಟೇ ಈ ಜೋಡಿ ಮನೆ ನಿರ್ಮಿಸಿ ಅದ್ಧೂರಿಯಾಗಿ ಗೃಹ ಪ್ರವೇಶ ಸಮಾರಂಭ ನಡೆಸಿತ್ತು. ಆದರೆ ಇದ್ದಕ್ಕಿದ್ದಂತೆ ದೂರವಾಗಲು ಯಾಕೆ ನಿರ್ಧರಿಸಿದರು ಎನ್ನುವುದು ಯಕ್ಷಪ್ರಶ್ನೆ. ಪರಸ್ಪರ ನಿರ್ಧಾರ ಮಾಡಿಯೇ ಬೇರೆ ಆಗಲು ಈ ದಂಪತಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.

2003ರಲ್ಲಿ ತೆರೆಕಂಡ ʼಕಿಚ್ಚʼ ಕನ್ನಡ ಚಿತ್ರದ ಸಣ್ಣ ಪಾತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ಅಜಯ್‌ ರಾವ್‌ ಬಳಿಕ ʼಎಕ್ಸ್‌ಕ್ಯೂಸ್‌ ಮೀʼ ಮೂಲಕ ನಾಯಕನಾಗಿ ಭಡ್ತಿ ಪಡೆದರು. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು ಸುಮಾರು 2 ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ಅವರು ನಿರ್ಮಿಸಿ, ನಾಯಕನಾಗಿ ನಟಿಸಿದ ʼಯುದ್ಧಕಾಂಡ ಚಾಪ್ಟರ್‌ 2ʼ ಸಿನಿಮಾ ಗಮನ ಸೆಳೆದಿತ್ತು.

[pj-news-ticker]